ಸಿಂಗಪುರದಲ್ಲಿ ರೆಸ್ಟ್​? ರಾತ್ರೋರಾತ್ರಿ ವಿಮಾನ ಏರಿದ ಮಾಜಿ ಸಿಎಂ ಕುಮಾರಸ್ವಾಮಿ

HDK
Published on

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರು ಶನಿವಾರ (ಮೇ 28) ರಾತ್ರಿ ಸಿಂಗಪುರಕ್ಕೆ ಪ್ರಯಾಣ ಬೆಳೆಸಿದ್ದಾರೆ. ಮಾಜಿ ಸಚಿವ ಸಾ.ರಾ.ಮಹೇಶ್ ಮತ್ತು ವಿಧಾನಪರಿಷತ್ ಸದಸ್ಯ ಭೋಜೇಗೌಡ ಅವರ ಜತೆಗೆ ಸಿಂಗಪುರದಲ್ಲಿ ಕುಮಾರಸ್ವಾಮಿ ತೆರಳಿದ್ದಾರೆ.

ಜೆಡಿಎಸ್‌ನ ಮಹತ್ವಾಕಾಂಕ್ಷಿ ಜನತಾ ಜಲಧಾರೆ, ಜನತಾ ಪರ್ವ ಕಾರ್ಯಕ್ರಮ ಹಾಗೂ ಪಕ್ಷ ಸಂಘಟನೆಗಾಗಿ ಸರಣಿ ಸಭೆಗಳಿಂದ ಬಳಲಿದ್ದ ಹಿನ್ನೆಲೆಯಲ್ಲಿ ವಿಶ್ರಾಂತಿಗಾಗಿ ಸಿಂಗಪುರಕ್ಕೆ ಹೋಗಿದ್ದಾರೆ ಎನ್ನಲಾಗಿದೆ. ನಾಲ್ಕು ದಿನಗಳ ಕಾಲ ಸಿಂಗಪುರದಲ್ಲಿದ್ದು, ಜೂನ್ 2ರಂದು ನಗರಕ್ಕೆ ವಾಪಸ್ ಆಗಲಿದ್ದಾರೆ ಎಂದು ತಿಳಿದುಬಂದಿದೆ.

ಜಲಧಾರೆ ಕಾರ್ಯಕ್ರಮದಲ್ಲಿ ಸುಮಾರು ಒಂದು ತಿಂಗಳ ಕಾಲ ನಿರಂತರ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದರು. ಸಭೆ, ಸಮಾರಂಭಗಳಲ್ಲಿ ಭಾಗಿಯಾಗಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net