ರಾಜ್ಯದಲ್ಲಿ 4 ದಿನ ಭಾರಿ ಮಳೆ, 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

Heavy Rain
Published on

ಬೆಂಗಳೂರು: ರಾಜ್ಯದಲ್ಲಿ ಮುಂದಿನ 4 ದಿನ ವ್ಯಾಪಕವಾಗಿ ಮಳೆ ಸುರಿಯಲಿದೆ. ಭಾನುವಾರ ಉತ್ತರ ಕನ್ನಡದ ಗೇರುಸೊಪ್ಪ 70 ಮಿಮೀ, ಗೋಕರ್ಣ ಮತ್ತು ಅಂಕೋಲಾದಲ್ಲಿ ತಲಾ 60 ಮಿಮೀ, ಬೀದರ್‌ನ ದಬಕ 80 ಮಿಮೀ, ಔರದ್ 60 ಮಿಮೀ ಹಾಗೂ ಕೊಡಗಿನ ಭಾಗಮಂಡಲದಲ್ಲಿ 70 ಮಿಮೀ ಮಳೆ ಸುರಿದಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮುಂದಿನ 48 ಗಂಟೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದರೆ, ಜೂ 29, 30ರಂದು ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಭಾಗಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಮತ್ತು ಹಾಸನದಲ್ಲಿ ಜೂ 28ರಿಂದ ಮುಂದಿನ 3 ದಿನ ಹಾಗೂ ಬೀದರ್, ಕಲಬುರಗಿ, ಬೆಳಗಾವಿ, ಬಳ್ಳಾರಿ, ಬೆಂಗಳೂರು ಮತ್ತು ಬೆಂ.ಗ್ರಾಮಾಂತರದಲ್ಲಿ ಜೂ 27ರಂದು ಯೆಲ್ಲೋ ಅಲರ್ಟ್ ಇರಲಿದೆ ಎಂದು ಇಲಾಖೆ ಮಾಹಿತಿ ಕೊಟ್ಟಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net