

ಹುಬ್ಬಳ್ಳಿ: ಈರುಳ್ಳಿಯ ಹೊಲದಲ್ಲಿ ಗಾಂಜಾ ಬೆಳೆ ಬೆಳೆಯುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಇಂದು ಹುಬ್ಬಳ್ಳಿಯ ಕುಸುಬಲ್ ಗ್ರಾಮದಲ್ಲಿ ನಡೆದಿದೆ.
ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಬೆಳೆ ಬೆಳೆಯುತ್ತಿದ್ದ ಚಂದ್ರು ಕಾಶೀನಾಥ ಬನ್ನಿಕೊಪ್ಪ (30) ಎಂಬಾತನನ್ನು ಬಂಧಿಸಿದ್ದಾರೆ.
ಹುಬ್ಬಳ್ಳಿ ಮೂಲದ ವ್ಯಕ್ತಿಯೊಬ್ಬರಿಂದ ಜಮೀನು ಬಾಡಿಗೆ ಪಡೆದು ಈರುಳ್ಳಿ, ಮೆಣಸಿನಕಾಯಿ ಬೆಳೆಯುತ್ತಿರುವ ಆರೋಪಿ ಚಂದ್ರು, ಇವುಗಳ ನಡುವೆ ಗಾಂಜಾ ಬೆಳೆ ಬೆಳೆಯುತ್ತಿರುವುದು ಬೆಳಕಿಗೆ ಬಂದಿದೆ.
ಇದನ್ನೂ ನೋಡಿ: ಗಾಂಜಾ ಮಾರಾಟ, ನಾಲ್ವರ ಬಂಧನ
ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಪೊಲೀಸರು, 18.4 ಕೆ.ಜಿ. ಹಸಿ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಡಿವೈಎಸ್ ಪಿ ರವಿ ನಾಯಕ ಮಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟರ್ ರಮೇಶ ಗೋಕಾಕ ಹಾಗೂ ತಂಡ ದಾಳಿ ನಡೆಸಿದೆ. ಗ್ರಾಮೀಣ ಠಾಣೆಯಲ್ಲಿ ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.