

ಬೆಳಗಾವಿ: ಪ್ರವಚನ ಮಾಡುತ್ತಿರುವಾಗಲೇ ತೀವ್ರ ಹೃದಯಾಘಾತಕ್ಕೊಳಗಾದ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಬಸವಯೋಗ ಮಂಟಪ ಟ್ರಸ್ಟ್‌ನ ಬಳೋಬಾಳ್ ಮಠದ ಸಂಗನಬಸವ ಮಹಾಸ್ವಾಮೀಜಿ ಸ್ಥಳದಲ್ಲಿಯೇ ಲಿಂಗೈಕ್ಯರಾಗಿದ್ದಾರೆ.
ಇದು ನಡೆದಿರುವುದು ನವೆಂಬರ್ 6ರಂದು. ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನವೆಂಬರ್ 6 ಅವರ ಜನ್ಮ ದಿನ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡುತ್ತಿದ್ದರು. ನಡುವೆಯೇ ಹೃದಯಾಘಾತವಾಗಿದೆ. ಅವರು ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಕೊನೆಯುಸಿರೆಳೆದಿದ್ದಾರೆ. ಇವರಿಗೆ 53 ವರ್ಷ ವಯಸ್ಸಾಗಿತ್ತು.
ಸ್ವಾಮೀಜಿಯವರ ಪ್ರವಚನವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯಲಾಗುತ್ತಿತ್ತು. ಇದೇ ವೇಳೆ ಘಟನೆ ನಡೆದ ಕಾರಣ, ಸ್ವಾಮೀಜಿ ಬೀಳುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ.
ಆಶೀರ್ವಚನ ಮಾಡುತ್ತಲೇ ಸ್ವಾಮೀಜಿ ಲಿಂಗೈಕ್ಯರಾಗಿರುವ ವಿಡಿಯೋ ಇಲ್ಲಿದೆ: