ವಿಜ್ಞಾನಿ, ಅಂಕಣಕಾರ ಹಾಲ್ದೊಡ್ಡೇರಿ ವಿಧಿವಶ: ದೇಹದಾನಕ್ಕೆ ಮುಂದಾದ ಕುಟುಂಬಸ್ಥರು

haldodderi
Published on

ಬೆಂಗಳೂರು: ವಿಜ್ಞಾನಿ ಹಾಗೂ ಪ್ರಸಿದ್ಧ ಅಂಕಣಕಾರ ಸುಧೀಂದ್ರ ಹಾಲ್ದೊಡ್ಡೇರಿ ಇಂದು ನಿಧನರಾಗಿದ್ದಾರೆ. ಇವರಿಗೆ 61 ವರ್ಷ ವಯಸ್ಸಾಗಿತ್ತು.

ಸುಧೀಂದ್ರ ಅವರಿಗೆ ವಾರದ ಹಿಂದೆ ಹೃದಯಾಘಾತವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಇವರು ಡಿಆರ್‌ಡಿಒದಲ್ಲಿ ವಿಜ್ಞಾನಿಯಾಗಿ ಸೇವೆ ಸಲ್ಲಿಸಿದ್ದರು, ಜತೆಗೆ ಎಚ್‌ಎಎಲ್‌ ಸಂಸ್ಥೆಯ ಹಿರಿಯ ನಿವೃತ್ತ ಎಂಜಿನಿಯರ್ ಕೂಡ ಹೌದು.

ಅವರಿಗೆ ಏಳು ದಿನಗಳ ಹಿಂದೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದರು. ಮೆದುಳಿಗೆ ಆಮ್ಲಜನಕ ಸರಬರಾಜು ಆಗುವುದು ನಿಂತಿತ್ತು, ಈ ಮಧ್ಯೆ ಅವರ ಮೆದುಳು ನಿಷ್ಕ್ರಿಯ ಹಂತಕ್ಕೆ ತಲುಪಿತ್ತು ಎಂದು ವೈದ್ಯರು ಹೇಳಿದ್ದಾರೆ.

ಇವರ ದೇಹವನ್ನು ದಾನ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದು, ಬೆಂಗಳೂರಿನ ಮೆಡಿಕಲ್ ಕಾಲೇಜಿಗೆ ಅಂಗಾಂಗದಾನ ಮಾಡಲಾಗುತ್ತದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net