ಪ್ರವೀಣ್ ಮನೆಗೆ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ: ಕುಟುಂಬಕ್ಕೆ ಐದು ಲಕ್ಷ ರೂ. ಪರಿಹಾರ ನೀಡಿಕೆ

HDK
Published on

ಮಂಗಳೂರು: ಇತ್ತೀಚಿಗೆ ಬರ್ಬರವಾಗಿ ಹತ್ಯೆಯಾಗಿರುವ ಬಿಜೆಪಿಯ ಮುಖಂಡ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು, ಕುಟುಂಬಕ್ಕೆ ಐದು ಲಕ್ಷ ರೂ ಪರಿಹಾರದ ಚೆಕ್ ನೀಡಿದ್ದಾರೆ.

ಈ ಸಂದರ್ಭದಲ್ಲಿ ಪ್ರವೀಣ್ ಕುಟುಂಬಕ್ಕೆ ಅವರು ಸಾಂತ್ವನ ಹೇಳಿದ್ದಾರೆ. ನಂತರ ಮಾಧ್ಯಮದವರ ಜತೆ ಮಾತನಾಡಿದ ಅವರು, ಪ್ರವೀಣ್​ ಕುಟುಂಬಕ್ಕೆ ಸಾಂತ್ವನ ಹೇಳಿದ್ದೇನೆ. ಕುಟುಂಬ ಸಂಪೂರ್ಣ ಕಷ್ಟದಲ್ಲಿ ಇರೋದು ಮಾತುಕತೆ ನಂತರ ನನಗೆ ತಿಳಿದಿದೆ ಎಂದರು.

ಸಾವಿಗೆ ಕಾರಣಕರ್ತರಾದವರಿಗೆ ಕಠಿಣ ಶಿಕ್ಷೆ ಆಗಬೇಕು. ಕುಟುಂಬದ ಅಭಿಪ್ರಾಯ ಕೂಡ ಇದೇ ಆಗಿದೆ. ಅವರು ತಮ್ಮ ನೋವನ್ನು ನನ್ನೊಂದಿಗೆ ಹಂಚಿಕೊಂಡಿದ್ದಾರೆ. ಕಾಟಾಚಾರದ ತನಿಖೆ ಆಗಬಾರದು. ವಿಧವೆ ತಂಗಿಯನ್ನು ಸಾಕುವ ಜವಾಬ್ದಾರಿ ಇದೆ ಎಂದರು.

ಸರ್ಕಾರ ತನ್ನ ಜವಾಬ್ದಾರಿ ನಿರ್ವಹಿಸಲು ಆಗದೆ ತನಿಖಾ ಅಧಿಕಾರ ಹಸ್ತಾಂತರ ಮಾಡಿದೆ, ರಾಜ್ಯ ಬಿಜೆಪಿ ಸರ್ಕಾರದ ಬೇಜವಾಬ್ದಾರಿ ತೀರ್ಮಾನ ಇದು ಎಂದು ಇದೇ ವೇಳೆ ಎಚ್​ಡಿಕೆ ಆಕ್ರೋಶ ವ್ಯಕ್ತಪಡಿಸಿದರು. ನಮ್ಮ ಅಧಿಕಾರಿಗಳು ಬಹಳ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಎನ್.ಐ.ಎ ಗೆ ವಹಿಸಿದ ಪ್ರಕರಣಗಳ ರಿಸಲ್ಟ್ ಏನಾಗಿದೆ ಎಂದು ಅವರು ಪ್ರಶ್ನಿಸಿದರು (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net