ಅತಿವೃಷ್ಟಿಯಿಂದ ಚಿಕ್ಕಮಗಳೂರು ತತ್ತರ: ಸಚಿವ ಬೈರತಿಗೆ ಉಸ್ತುವಾರಿಯ ಹೆಚ್ಚುವರಿ ಹೊಣೆ

Bairati
Published on

ಬೆಂಗಳೂರು: ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಗೆ ಕೊನೆಗೂ ಒಬ್ಬ ಸಚಿವರನ್ನು ಸರ್ಕಾರ ನೇಮಿಸಿದೆ.

ನಗರಾಭಿವೃದ್ಧಿ ಖಾತೆ ಹೊಣೆ ಹೊತ್ತ ಬೈರತಿ ಬಸವರಾಜ ಅವರಿಗೆ ದಾವಣಗೆರೆ ಜತೆಗೆ ಹೆಚ್ಚುವರಿಯಾಗಿ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಹೊಣೆ ನೀಡಲಾಗಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ( ಶಿಷ್ಟಾಚಾರ) ಈ ಕುರಿತು ಆದೇಶ ಹೊರಡಿಸಿದೆ. ಸತತ ಮಳೆಯಿಂದ ಚಿಕ್ಕಮಗಳೂರು ಜಿಲ್ಲೆ ತತ್ತರಿಸಿರುವ ಸಂದರ್ಭದಲ್ಲಿ ಉಸ್ತುವಾರಿ ಸಚಿವರ ನೇಮಕವಾಗಿದೆ.

ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯವಿಲ್ಲದ ಜಿಲ್ಲೆಗಳಿಗೆ ಬೇರೆ ಜಿಲ್ಲೆಗಳ ಸಚಿವರು ನೇಮಕವಾಗಿದ್ದು, ಕೆಲವು ಸಚಿವರಿಗೆ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಆದರೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರತಿನಿಧಿಸುತ್ತಿರುವ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ದೀರ್ಘಾವಧಿಯಿಂದ ಖಾಲಿಯಿತ್ತು.

ಹೆಚ್ಚುವರಿ ಉಸ್ತುವಾರಿ ಹೊಣೆ‌ ಹೊತ್ತ ಬೆನ್ನಲ್ಲೇ ಬೈರತಿ ಬಸವರಾಜ ಅವರು ಚಿಕ್ಕಮಗಳೂರು ಜಿಲ್ಲೆಯ ಅತಿವೃಷ್ಟಿ ಬಾಧಿತ ಪ್ರದೇಶಕ್ಕೆ ಶನಿವಾರ ಭೇಟಿ ನೀಡಿ, ಹಾನಿ ಪರಿಶೀಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net