

ಹುಬ್ಬಳ್ಳಿ ನೈಋತ್ಯ ರೈಲ್ವೆ ವಲಯದ ಜನರಲ್ ಡಿಪಾರ್ಟ್ಮೆಂಟ್ ಆಫ್ ಕಾಂಪಿಟೇಟಿವ್ ಎಕ್ಸಾಮಿನೇಷನ್ನಲ್ಲಿ ಜೂನಿಯರ್ ಹಿಂದಿ ಟ್ರಾನ್ಸ್ಲೇಟರ್ ಹುದ್ದೆಯನ್ನು ಭರ್ತಿಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಒಟ್ಟು 7 ಹುದ್ದೆಗಳಿದ್ದು, ಸಾಮಾನ್ಯ 1, ಇತರ 2, ಎಸ್ಸಿ 2 ಮತ್ತು ಎಸ್ಟಿಗೆ 2 ಹುದ್ದೆ ಮೀಸಲಿರಿಸಲಾಗಿದೆ.
ವಿದ್ಯಾರ್ಹತೆ
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಹಿಂದಿ ಅಥವಾ ಇಂಗ್ಲಿಷ್ ವಿಷಯದಲ್ಲಿ ಪದವಿ ಪಡೆದಿರಬೇಕು. ಹಿಂದಿ ಮತ್ತು ಇಂಗ್ಲಿಷ್ ವಿಷಯದಲ್ಲಿ ಡಿಪ್ಲೊಮಾ ಕೋರ್ಸ್ ಮುಗಿಸಿರಬೇಕು. ಟ್ರಾನ್ಸ್ಲೇಷನ್ ಟ್ರೇನಿಂಗ್ ಕೋರ್ಸ್ ಆಗಿರಬೇಕು.
ವೇತನ, ವಯೋಮಿತಿ
7ನೇ ವೇತನ ಶ್ರೇಣಿ ಅನ್ವಯ 6ನೇ ಹಂತದ ಮಾಸಿಕ ವೇತನ ನಿಗದಿಪಡಿಸಲಾಗಿದೆ. 42 ವರ್ಷ ವಯೋಮಿತಿ ಇದ್ದು, ಇತರ ಅಭ್ಯರ್ಥಿಗೆ 45, ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 47 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಆಯ್ಕೆ ಪ್ರಕ್ರಿಯೆ
ಅರ್ಹ ಅಭ್ಯರ್ಥಿಗಳಿಗೆ ಸಿಂಗಲ್ ಸ್ಟೇಜ್ ಕಂಪ್ಯೂಟರ್ ಬೇಸ್ಡ್ ಟೆಸ್ಟ್, ಟ್ರಾನ್ಸ್ಲೇಷನ್ ಟೆಸ್ಟ್ ಮತ್ತು ದಾಖಲೆ ಪರಿಶೀಲನೆ ಇರಲಿದೆ.
ಅರ್ಜಿ ಸಲ್ಲಿಸುವ ವಿಧಾನ
ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ನೇರವಾಗಿ ಬಂದ ಅರ್ಜಿ ಪುರಸ್ಕರಿಸುವುದಿಲ್ಲ. ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ನಿಗದಿಯಾಗಿಲ್ಲ. ಅರ್ಜಿಯಲ್ಲಿ ಮೊಬೈಲ್ ಸಂಖ್ಯೆ ಹಾಗೂ ಇ-ಮೇಲ್ ವಿಳಾಸವನ್ನು ಕಡ್ಡಾಯವಾಗಿ ನಮೂದಿಸತಕ್ಕದ್ದು. ಒಬ್ಬರು ಒಂದು ಅರ್ಜಿ ಸಲ್ಲಿಸಲು ಮಾತ್ರ ಅರ್ಹರು.
ಅರ್ಜಿ ಸಲ್ಲಿಸಲು ಕೊನೇ ದಿನ: 22.6.2022
ಅಧಿಸೂಚನೆಗೆ: https://bit.ly/3LVDkvX
ಮಾಹಿತಿಗೆ: https://rrcmas.in/