

ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 9 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 78 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು. ಈ ನೇಮಕಾತಿಗಳು ಗೌರವಧನ ಆಧಾರಿತವಾಗಿವೆ. ಕಾರ್ಯಕರ್ತೆಗೆ ಮಾಸಿಕ 10,000 ರೂ, ಸಹಾಯಕಿಯರಿಗೆ 5,000 ರೂ. ವೇತನ ನಿಗದಿಯಾಗಿದೆ.
ಹುದ್ದೆಗಳ ವಿವರ
ಅಂಗನವಾಡಿ ಕಾರ್ಯಕರ್ತೆ-9
ಅಂಗನವಾಡಿ ಸಹಾಯಕಿ-78
ಎಲ್ಲೆಲ್ಲಿ ನೇಮಕ
ದಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಮಂಗಳೂರು ನಗರ, ಮಂಗಳೂರು ಗ್ರಾಮೀಣ, ಬಂಡ್ವಾಳ, ವಿಟ್ಲ, ಪುತ್ತೂರು ಅಂಗನವಾಡಿಗಳಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದೆ.
ಶೈಣಿಕ ಅರ್ಹತೆ
ಕಾರ್ಯಕರ್ತೆ ಹುದ್ದೆಗೆ ಎಸ್ಸೆಸ್ಸೆಲ್ಸಿ, ಸಹಾಯಕಿಯರ ಹುದ್ದೆಗೆ ಕನಿಷ್ಠ 4ನೇ ತರಗತಿ, ಗರಿಷ್ಠ 9ನೇ ತರಗತಿ ಓದಿದ್ದು, ಕನ್ನಡ ಭಾಷೆ ಜ್ಞಾನ ಅವಶ್ಯವಾಗಿದೆ.
ವಯೋಮಿತಿ
ಅಭ್ಯರ್ಥಿಯ ವಯಸ್ಸು 18ರಿಂದ 35 ವರ್ಷದೊಳಗಿರಬೇಕು. ಕಾರ್ಯಕರ್ತೆಯರ ಹುದ್ದೆಗಳಿಗೆ ಮಾತ್ರ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ಅಂದರೆ 45 ವರ್ಷ ವಯೋಸಡಿಲಿಕೆ ಇದೆ.
ಅರ್ಜಿ ಸಲ್ಲಿಸುವ ವಿಧಾನ
ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಎಲ್ಲ ದಾಖಲೆಗಳು ಸರಿಯಾಗಿದೆಯೇ ಎಂದು ಪರಿಶೀಲಿಸಿ ಅರ್ಜಿ ಸಲ್ಲಿಸಬೇಕು. ಅಪೂರ್ಣ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ಮೀಸಲಾತಿ ಕೋರುವವರು ಸ್ಥಳಿಯ ಆಡಳಿತದಿಂದ ಪಡೆದ ಪ್ರಮಾಣ ಪತ್ರಗಳನ್ನು ಸಲ್ಲಿಸತಕ್ಕದ್ದು. ಅಂಗವಿಕಲರು ಸಹಾಯಕಿ ಹುದ್ದೆಗೆ ಅರ್ಹರಾಗಿರುತ್ತಾರೆ.
ಆಯ್ಕೆ ಪ್ರಕ್ರಿಯೆ
ಸ್ಥಳಿಯ ಸಂಸ್ಥೆಗಳ ಜನಪ್ರತಿನಿಧಿಗಳಾಗಿದ್ದಲ್ಲಿ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಒಂದು ಹುದ್ದೆಯಲ್ಲಿ ಮಾತ್ರ ಮುಂದುವರಿಯಬೇಕು. ಸ್ಥಳಿಯ ಅಭ್ಯರ್ಥಿಗಳಿಗೇ ಹೆಚ್ಚು ಪ್ರಾಮುಖ್ಯತೆ ನೀಡಲಾಗುವುದು. ಶೈಣಿಕ ಅಂಕ, ಮೀಸಲಾತಿ ಆಧರಿಸಿ ಅರ್ಹರನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲು ಕೊನೇ ದಿನ: 21.7.2022
ಅಧಿಸೂಚನೆಗೆ: https://bit.ly/39KxWyH
ಮಾಹಿತಿಗೆ: http://anganwadirecruit.kar.nic.in
ಚಿತ್ರದುರ್ಗ ಜಿಲ್ಲೆಯಲ್ಲಿಯೂ ಅವಕಾಶ:
ಚಿತ್ರದುರ್ಗ ಜಿಲ್ಲೆಯ 7 ತಾಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ 16 ಅಂಗನವಾಡಿ ಕಾರ್ಯಕರ್ತೆ ಹಾಗೂ 96 ಸಹಾಯಕಿಯರ ಹುದ್ದೆಗೆ ಶಿಶು ಅಭಿವೃದ್ಧಿ ಇಲಾಖೆಯು ಮಹಿಳೆಯರಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ.
ಅಭ್ಯರ್ಥಿಗಳು ಜನನ ಪ್ರಮಾಣ ಪತ್ರ, ವಿದ್ಯಾರ್ಹತೆ ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ ಪತ್ರ (ತಹಸೀಲ್ದಾರ್ ಕಚೇರಿಯಿಂದ ಪಡೆದದ್ದು), ಜಾತಿ ಪ್ರಮಾಣಪತ್ರವನ್ನು ಸಲ್ಲಿಸಬೇಕು. ಆನ್ಲೈನ್ ಅರ್ಜಿಗಳಿಗೆ ಮಾತ್ರ ಮಾನ್ಯತೆ ಇದ್ದು, ದಾಖಲೆಗಳು ಅಸ್ಪಷ್ಟವಾಗಿದ್ದರೆ ಅರ್ಜಿ ತಿರಸ್ಕರಿಸಲಾಗುವುದು ಎಂದು ತಿಳಿಸಲಾಗಿದೆ. ಗೌರವಧನದ ಆಧಾರದ ಮೇಲೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಸಹಾಯಕಿ ಹುದ್ದೆಗೆ ಅಂಗವಿಕಲರು ಅರ್ಹರಾಗಿರುವುದಿಲ್ಲ. ಈ ನೇಮಕಾತಿಗಳು ಗೌರವಧನ ಆಧಾರಿತವಾಗಿವೆ. ಕಾರ್ಯಕರ್ತೆಗೆ ಮಾಸಿಕ 10,000 ರೂ, ಸಹಾಯಕಿಯರಿಗೆ 5,000 ರೂ. ವೇತನ ನಿಗದಿಯಾಗಿದೆ.
ವಿದ್ಯಾರ್ಹತೆ:
ಕಾರ್ಯಕರ್ತೆ ಹುದ್ದೆಗೆ ಎಸ್ಸೆಸ್ಸೆಲ್ಸಿ, ಸಹಾಯಕಿಯರ ಹುದ್ದೆಗೆ ಕನಿಷ್ಠ 4ನೇ ತರಗತಿ, ಗರಿಷ್ಠ 9ನೇ ತರಗತಿ ಓದಿದ್ದು, ಕನ್ನಡ ಭಾಷೆ ಜ್ಞಾನ ಅವಶ್ಯವಾಗಿದೆ. ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷವಯೋಮಿತಿ ನಿಗದಿಪಡಿಸಿದ್ದು, ಅಂಗವಿಕಲರಿಗೆ 10 ವರ್ಷ ವಯೋಸಡಿಲಿಕೆ ನೀಡಲಾಗುವುದು.
ಎಲ್ಲಿವೆ ಹುದ್ದೆಗಳು?
ಭರಮಸಾಗರ, ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು, ಹೊಳಲ್ಕೆರ, ಹೊಸದುರ್ಗ, ಮೊಳಕಾಲ್ಮೂರು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಗ್ರಾಮಗಳ ಅಂಗನವಾಡಿಗಳಲ್ಲಿ ಹುದ್ದೆಗಳು ಖಾಲಿ ಇವೆ.
* ಈ ಪ್ರಮಾಣಪತ್ರಗಳಿದ್ದಲ್ಲಿ ಸಲ್ಲಿಸಿ
ಅಭ್ಯರ್ಥಿಗಳು ವಿಧವೆ, ವಿಚ್ಛೇದಿತೆ, ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಯಿಂದ ಪಡೆದ ಪ್ರಮಾಣ ಪತ್ರ ಸಲ್ಲಿಸಬೇಕು. ದೇವದಾಸಿಯರ ಮಕ್ಕಳು, ಅಂಗವಿಕಲರಾಗಿದ್ದಲ್ಲಿ ಸರ್ಕಾರದಿಂದ ದೃಢೀಕರಿಸಿದ ಪ್ರಮಾಣಪತ್ರ, ಪರಿತ್ಯಕ್ತೆ ಎಂದು ಗ್ರಾಪಂನಿಂದ ನೀಡಿದ ಪತ್ರ, ಯೋಜನಾ ನಿರಾಶ್ರಿತರಾಗಿದ್ದಲ್ಲಿ ತಹಸೀಲ್ದಾರ್ರಿಂದ ಪಡೆದ ಪತ್ರಗಳನ್ನು ಅರ್ಜಿಯೊಂದಿಗೆ ಸಲ್ಲಿಸಬಹುದು. ಈ ಪ್ರಮಾಣಪತ್ರಗಳನ್ನು ಆಯಾ ಮೀಸಲಾತಿಗೆ ಪರಿಗಣಿಸಲಾಗುತ್ತದೆ.
ಆದ್ಯತೆ: ವಿದ್ಯಾರ್ಹತೆ, ವಯೋಮಿತಿ, ಆಸಿಡ್ ದಾಳಿಗೆ ತುತ್ತಾದವರು, ಇಲಾಖೆಯ ಸಂಸ್ಥೆಗಳಲ್ಲಿ ಹಾಗೂ ರಾಜ್ಯ ಮಹಿಳಾ ನಿಲಯಗಳಲ್ಲಿ ಆಶ್ರಯ ಪಡೆದವರಿಗೆ, ವಿಧವೆಯರಿಗೆ, ಸ್ಥಳಿಯರಿಗೆ ಆದ್ಯತೆ ನೀಡಿ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲು ಕೊನೇ ದಿನ: 18.7.2022
ಅಧಿಸೂಚನೆಗೆ: https://bit.ly/3N3OU8H
ಮಾಹಿತಿಗೆ: https://anganwadirecruit.kar.nic.in