

ಮಂಗಳೂರು : ಎಸ್.ಕೆ.ಗೋಲ್ಡ್‌ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯ ವಜ್ರ ಮಹೋತ್ಸವ ಆಚರಣೆಯ ಅಂಗವಾಗಿ ಹಮ್ಮಿಕೊಂಡ ಗೃಹ ನಿರ್ಮಾಣ ಯೋಜನೆಯಡಿ ಉಡುಪಿ ಜಿಲ್ಲೆಯ ಬಿಲ್ಲಾಡಿ ಗ್ರಾಮದ ಬೂದಾಡಿಯಲ್ಲಿ ಬಡ ದಂಪತಿಗೆ ಹೊಸ ಮನೆ ನಿರ್ಮಿಸಿ ಕೊಡುಗೆಯಾಗಿ ನೀಡುತ್ತಿದೆ. ಲಲಿತಾ - ಗಣೇಶ ಆಚಾರ್ಯ ದಂಪತಿಗೆ 7.60 ಲಕ್ಷ ರೂ.ವೆಚ್ಚದಲ್ಲಿ ಸುಸಜ್ಜಿತ ಮನೆಯ ನಿರ್ಮಾಣವಾಗಿದ್ದು, ಇದರ ಹಸ್ತಾಂತರ ಕಾರ್ಯಕ್ರಮ ಜು.6ರಂದು ಬೆಳಗ್ಗೆ 11ಕ್ಕೆ ನಡೆಯಲಿದೆ.
ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಎಸ್.ಕೆ.ಗೋಲ್ಡ್‌ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಪಿ. ಉಪೇಂದ್ರ ಆಚಾರ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಧನಂಜಯ ಶೆಟ್ಟಿ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಶಾಸಕ ಕಿರಣ್‌ಕುಮಾರ್ ಕೊಡ್ಗಿ ಮತ್ತು
ಶಂಕರನಾರಾಯಣ ವಲಯ ಅರಣ್ಯಾಧಿಕಾರಿ ಜ್ಯೋತಿ ಕೆ.ಸಿ.ಸಸಿ ವಿತರಣೆ ಮಾಡಲಿದ್ದಾರೆ.
ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ನ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ, ಬಾರ್ಕೂರು ಶ್ರೀ
ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀಧರ ಆಚಾರ್ ವಡೇರಹೋಬಳಿ, ಉದ್ಯಮಿ ದಿನೇಶ್ ಹೆಗ್ಡೆ ಮೊಳಹಳ್ಳಿ, ಬಿಲ್ಲಾಡಿ ಗ್ರಾಪಂ ಅಧ್ಯಕ್ಷೆ ಸರಸ್ವತಿ ಬಾ ವಂಡಾರು, ರಥಶಿಲ್ಪಿ ರಾಜಗೋಪಾಲ ಆಚಾರ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.