ಎಸ್.ಖುಷಿ, ಗಗನ್‌ಗೌಡ ಸಾಧನೆ ಪ್ರಶಂಸನೀಯ

10M.D.R.3
ಮದ್ದೂರು ಪಟ್ಟಣದ ಶಿವಪುರದ ಪೂರ್ಣಪ್ರಜ್ಞಾ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಾದ ಎಸ್.ಖುಷಿ ಹಾಗೂ ಗಗನ್‌ಗೌಡಗೆ ಬಿಇಒ ಸಿ.ಎಚ್.ಕಾಳೀರಯ್ಯ ಸಿಹಿ ತಿನಿಸಿ ಅಭಿನಂದಿಸಿದರು. ಅನಂತೇಗೌಡ, ಮಹೇಶ್ ಇದ್ದರು.
Published on

ಮದ್ದೂರು: ಪಟ್ಟಣದ ಶಿವಪುರದ ಪೂರ್ಣಪ್ರಜ್ಞಾ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಾದ ಎಸ್.ಖುಷಿ ಹಾಗೂ ಗಗನ್‌ಗೌಡ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ ಹಾಗೂ ಜಿಲ್ಲೆಗೆ ತೃತೀಯ (ಮೂರನೇ) ಸ್ಥಾನ ಪಡೆದಿರುವುದು ಮೆಚ್ಚುಗೆ ವಿಷಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಚ್.ಕಾಳೀರಯ್ಯ ಪ್ರಶಂಸೆ ವ್ಯಕ್ತಪಡಿಸಿದರು.

ಪಟ್ಟಣದ ಬಿಇಒ ಕಚೇರಿಯಲ್ಲಿ ಶುಕ್ರವಾರ ಇಬ್ಬರೂ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದರು. ಖುಷಿ ಹಾಗೂ ಗಗನ್ ಎಸ್.ಗೌಡ ಕ್ರಮವಾಗಿ 619 (ಶೇ.99.04)ಅಂಕ ಪಡೆದು ತಾಲೂಕಿಗೆ ಕೀರ್ತಿ ತಂದಿದ್ದಾರೆ. ಸಂಸ್ಥೆಯ ಅಧ್ಯಕ್ಷೆ ಕಸ್ತೂರಿ ಅನಂತೇಗೌಡ ಹಾಗೂ ಕಾರ್ಯದರ್ಶಿ ಅನಂತೇಗೌಡ ಅವರು ಉತ್ತಮ ಫಲಿತಾಂಶಕ್ಕಾಗಿ ಶ್ರಮಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಲೆಯ ಆಡಳಿತ ಮಂಡಳಿ ಮಕ್ಕಳಿಗೆ ತರಬೇತಿ ನೀಡುತ್ತಿರುವುದು ಮೆಚ್ಚುಗೆ ವಿಷಯ. ಮುಂದೆಯೂ ಇದೇ ರೀತಿಯಲ್ಲಿ ಉತ್ತಮ ಫಲಿತಾಂಶ ಬರುವಂತೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಬೇಕು ಎಂದು ಆಶಿಸಿದರು.

ಪೂರ್ಣಪ್ರಜ್ಞಾ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಅನಂತೇಗೌಡ, ಶಿಕ್ಷಣ ಸಂಯೋಜಕ ಮಹೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net