ವೈದ್ಯೆಯಾಗುವ ಕನಸು ಕಾಣುತ್ತಿದ್ದ ಬಳ್ಳಾರಿಯ ವೈದ್ಯಕೀಯ ವಿದ್ಯಾರ್ಥಿನಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

student
Published on

ಕೊಪ್ಪಳ: ಚಲಿಸುತ್ತಿದ್ದ ಗೂಡ್ಸ್​ ರೈಲಿಗೆ ತಲೆಕೊಟ್ಟು ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳದಲ್ಲಿ ನಡೆದಿದೆ ಕೊಪ್ಪಳದ ಕಿಡದಾಳ್ ರೈಲ್ವೇ ಹಳಿಯ ಮೇಲೆ ಈ ಘಟನೆ ನಡೆದಿದೆ.

22 ವರ್ಷದ ತೇಜಶ್ರೀ ಆತ್ಮಹತ್ಯೆ ಮಾಡಿಕೊಂಡ‌ವರು. ಬಳ್ಳಾರಿಯ ತೇಜಶ್ರೀ, ಕೊಪ್ಪಳದ ಆಸ್ಪತ್ರೆಯಲ್ಲಿ ಇಂಟರ್ನ್‌ಶಿಪ್‌ ಕೆಲಸ ಮಾಡುತ್ತಿದ್ದರು. ಆದರೆ ಮಾನಸಿಕವಾಗಿ ನೊಂದಿದ್ದ ಈಕೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸ್ಥಳೀಯರು ಕೂಡಲೇ ಸ್ಥಳೀಯರು ಆಸ್ಪತ್ರೆಯಲ್ಲಿ ದಾಖಲಿಸಿದಾದರೂ ಚಿಕಿತ್ಸೆ ಫಲಕಾರಿಯಾಗದೆ ತೇಜಶ್ರೀ ಸಾವನ್ನಪ್ಪಿದ್ದಾರೆ.

ಕಳೆದ ಮೂರು ತಿಂಗಳಿಂದ ಮಾನಸಿಕ ಖಿನ್ನತೆಗೆ ತೇಜಶ್ರೀ ಒಳಗಾಗಿದ್ದರು ಎಂದು ಪಾಲಕರು ತಿಳಿಸಿದ್ದಾರೆ. ಆದರೆ ಇದಕ್ಕೆ ಸ್ಪಷ್ಟ ಕಾರಣ ಇನ್ನೂ ಹೊರಬಂದಿಲ್ಲ. ಗದಗ ರೈಲ್ವೆ ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ಸಾವಿನ ತನಿಖೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net