ಎಸ್.ಕೊಪ್ಪಲು ಡೇರಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

IMG-20250429-WA0065
ಎಸ್.ಕೊಪ್ಪಲು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷೆಯಾಗಿ ಎಸ್.ವಿ.ಜಯಶೀಲಾ ಹಾಗೂ ಉಪಾಧ್ಯಕ್ಷರಾಗಿ ದೇವರಾಜ ಆಯ್ಕೆಯಾಗಿದ್ದಾರೆ.
Published on

ರಾವಂದೂರು: ಸಮೀಪದ ಎಸ್.ಕೊಪ್ಪಲು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷೆಯಾಗಿ ಎಸ್.ವಿ.ಜಯಶೀಲಾ ಹಾಗೂ ಉಪಾಧ್ಯಕ್ಷರಾಗಿ ದೇವರಾಜ ಆಯ್ಕೆಯಾಗಿದ್ದಾರೆ.

ಪಿರಿಯಾಪಟ್ಟಣ ತಾಲೂಕು, ಎಸ್.ಕೊಪ್ಪಲು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಎಸ್.ವಿ.ಜಯಶೀಲಾ, ಉಪಾಧ್ಯಕ್ಷ ಸ್ಥಾನಕ್ಕೆ ದೇವರಾಜ್ ಮಾತ್ರ ನಾಮಪತ್ರ ಸಲ್ಲಿಸಿದ ಚುನಾವಣೆ ಅಧಿಕಾರಿ ಜೆ.ಪ್ರೇಮ್ ಅವಿರೋಧ ಆಯ್ಕೆ ಘೋಷಿಸಿದ್ದಾರೆ.

ಈ ಸಂದರ್ಭದಲ್ಲಿ ನಿರ್ದೇಶಕರಾದ ಸುರೇಶ್, ರಾಮಚಂದ್ರ , ಕುಮಾರ್, ಚೆಲುವಮ್ಮ, ರೇಣುಕಾ, ಅಣ್ಣಯ್ಯ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net