ಕೆಎಸ್ಆರ್‌ಟಿಸಿ ಬಸ್‌- ಬೈಕ್ ನಡುವೆ ಶಿವಮೊಗ್ಗದಲ್ಲಿ ಭೀಕರ ಅಪಘಾತ- ಇಬ್ಬರು ಸಾವು

bus
Published on

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮಾಚೇನಹಳ್ಳಿ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಕೆಎಸ್​​ಆರ್​ಟಿಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತಪಟ್ಟವರನ್ನು ಅಂಥೋಣಿ(34) , ಮಂಜುನಾಥ್ (28) ಎಂದು ಗುರುತಿಸಲಾಗಿದೆ. ಇವರಿಬ್ಬರೂ ಭದ್ರಾವತಿ ತಾಲೂಕಿನ ಜಯಂತಿ ನಗರದವರು. ಬಸ್​ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಭದ್ರಾವತಿಯ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೆಎಸ್‌ಆರ್‌ಟಿಸಿ ಬಸ್ಸು ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿತ್ತು. ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಭದ್ರಾವತಿ ಸಂಚಾರ ನಿಯಂತ್ರಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net