

ಬೆಂಗಳೂರು: ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್. ಧರ್ಮೇಗೌಡರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ರಾಜ್ಯ ಸರ್ಕಾರ, ಅವರ ಅಂತ್ಯಸಂಸ್ಕಾರವನ್ನು ಸರ್ಕಾರಿ ಗೌರವದೊಂದಿಗೆ ನಡೆಸುವುದಕ್ಕೆ ಅಧಿಸೂಚನೆ ಪ್ರಕಟಿಸಿದೆ.
ಕನಿಷ್ಠ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಕೋವಿಡ್ ನಿಯಮ ಪಾಲಿಸುತ್ತ ಅಂತ್ಯಸಂಸ್ಕಾರ ನೆರವೇರಿಸುವುದಕ್ಕೆ ಸರ್ಕಾರ ಆದೇಶ ನೀಡಿದೆ. ಈ ನಡುವೆ, ವಿಧಾನ ಪರಿಷತ್ ಸಚಿವಾಲಯವೂ ಉಪ ಸಭಾಪತಿ ಎಸ್.ಎಲ್.ಧರ್ಮೇಗೌಡ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದೆ. ಮೃತರ ಗೌರವಾರ್ಥ ವಿಧಾನ ಪರಿಷತ್ ಸಚಿವಾಲಯಕ್ಕೆ ಮಂಗಳವಾರ ಒಂದು ದಿನದ ರಜೆ ಘೋಷಿಸಿ ಸಭಾಪತಿ ಕೆ.ಪ್ರತಾಪಚಂದ್ರಶೆಟ್ಟಿ ಆದೇಶಿಸಿದ್ದಾರೆ.
ಕಡೂರಿಗೆ ಸಿಎಂ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಮಧ್ಯಾಹ್ನ 2.30ಕ್ಕೆ ಹೆಲಿಕಾಪ್ಟರ್ ನಲ್ಲಿ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಪಿಳ್ಳೇನಹಳ್ಳಿಗೆ ತೆರಳಿ, ಅಕಾಲಿಕವಾಗಿ ನಿಧನರಾದ ಉಪ ಸಭಾಪತಿ ಎಸ್.ಎಲ್.ಧರ್ಮೇಗೌಡರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಲಿದ್ದಾರೆ
ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್ಗಾಗಿ ನಮ್ಮ ಫೇಸ್ಬುಕ್ ಪುಟ ಲೈಕ್ ಮಾಡಿ ಮತ್ತು ಫಾಲೋ ಮಾಡಿ..