ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕಾರು ಅಪಘಾತ: ರಸ್ತೆ ಬದಿಗೆ ಬಿದ್ದು ದುರ್ಘಟನೆ

savadi
Published on

ಚಿಕ್ಕೋಡಿ: ಮಾಜಿ ಉಪ ಮುಖ್ಯಮಂತ್ರಿ, ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಕಾರು ಅಪಘಾತವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹಾರುಗೇರಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಕಾರು ಬಿದ್ದಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಲಕ್ಷ್ಮಣ್ ಸವದಿ ಪಾರಾಗಿದ್ದಾರೆ.

ಸವದಿ ಅವರು ಅಥಣಿಯಿಂದ ಗೋಕಾಕ್​ ಕಡೆಗೆ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಹಾರುಗೇರಿ ಬಳಿ ಈ ಘಟನೆ ಸಂಭವಿಸಿದೆ. ಲಕ್ಕ್ಷ್ಮಣ ಸವದಿ ಜತೆಗೆ ಕಾರಿನಲ್ಲಿ ನಾಲ್ಕು ಜನ ಪ್ರಯಾಣ ಮಾಡುತ್ತಿದ್ದರು. ಹಾರುಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದ್ದು, ಇನ್ನಷ್ಟೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net