VIDEO: ಚಾಮುಂಡಿ ಬೆಟ್ಟದಲ್ಲಿ ಭೂಕುಸಿತ: ಸಂಚಾರ ಬಂದ್‌- ಭಕ್ತರು, ವಾಹನ ಸವಾರರಿಗೆ ವಿಶೇಷ ಸೂಚನೆ

chamundibetta
Published on

ಮೈಸೂರು: ಕೆಲ ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಚಾಮುಂಡಿ ಬೆಟ್ಟದ ರಸ್ತೆಯಲ್ಲಿ ಭೂ ಕುಸಿತ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಸಾರ್ವಜನಿಕರು, ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ಬೆಟ್ಟದಿಂದ ನಂದಿಗೆ ಹೋಗುವ ಮಾರ್ಗದಲ್ಲಿ ದಸರಾ ದೀಪಾಲಂಕಾರ ‘ಸುಸ್ವಾಗತ’ ವಿದ್ಯುತ್ ಬೋರ್ಡ್ ಸಮೀಪ ಈ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್‌ ಡಾ.ಚಂದ್ರಗುಪ್ತರಿಂದ ಹೇಳಿದ್ದಾರೆ.

ಅಪಘಾತ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುವುದರಿಂದ ಈ ರಸ್ತೆಯಲ್ಲಿ ಸಂಚಾರ ನಿಷೇಧಿಸಲಾಗಿದೆ. ಪ್ರವಾಸಿಗರು ಹಾಗೂ ಭಕ್ತರು ಆ ರಸ್ತೆಯಲ್ಲಿ ಸಂಚರಿಸದಂತೆ ಸೂಚನೆ ನೀಡಲಾಗಿದೆ. ಎರಡು ವರ್ಷಗಳ ಹಿಂದೆಯೂ ಇದೇ ರಸ್ತೆಯಲ್ಲಿ ಭೂ ಕುಸಿತ ಉಂಟಾಗಿತ್ತು.

ನಿನ್ನೆ ರಾತ್ರಿ ಭಾರಿ ಮಳೆ ಸುರಿದ ಹಿನ್ನೆಲೆಯಲ್ಲಿ ಮೈಸೂರಿನ ಹಲವು ಕಡೆಗಳಲ್ಲಿ ರಸ್ತೆಗಳು ತುಂಬಿ ತುಳುಕುತ್ತಿವೆ. ಹಲವೆಡೆ ವಾನಹಗಳನ್ನು ಎಳೆಯಲು ಸವಾರರು ಪರದಾಡಿರುವ ಸ್ಥಿತಿ ನಿರ್ಮಾಣವಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net