ರಾಜ್ಯದಲ್ಲಿ ಲಾಕ್​ಡೌನ್​ ಆಗತ್ತಾ, ಸೆಮಿ ಲಾಕ್​ಡೌನ್​ ಇರತ್ತಾ? ಆರೋಗ್ಯ ಸಚಿವರು ಏನು ಹೇಳಿದ್ರು ನೋಡಿ...

lockdown
Published on

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ ಓಡಾಡುತ್ತಿರುವವರ ಸಂಖ್ಯೆ ಹೆಚ್ಚಿದೆ. ಹೀಗಾಗಿ ಮಾಸ್ಕ್ ಇಲ್ಲದೆ ಓಡಾಡುವವರಿಗೆ 250 ರೂ.ದಂಡ ವಿಧಿಸುವ ಕ್ರಮವನ್ನು ಎರಡು ದಿನಗಳೊಳಗೆ ಬಿಗಿಗೊಳಿಸಲು ಸರ್ಕಾರ ನಿರ್ಧರಿಸಿದೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ಡಾ.ಸುಧಾಕರ್, ಲಾಕ್ ಡೌನ್, ಸೆಮಿ ಲಾಕ್ ಡೌನ್ ಮಾಡುವ ಪ್ರಸ್ತಾಪ ಇಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಬಹಳಷ್ಟು ಮಂದಿ ಮಾಸ್ಕ್ ಧರಿಸದೇ ಓಡಾಡುತ್ತಿದ್ದಾರೆ. ಕರೊನಾ ವೈರಸ್ ಕುರಿತು ಅರಿವು ಮೂಡಿಸುವ ಕೆಲಸ ಮಾಡುವಂತೆ ತೀರ್ಮಾನಿಸಲಾಗಿದೆ ಎಂದರು.

ಮಹಾರಾಷ್ಟ್ರ, ಕೇರಳ ಗಡಿ ಭಾಗಗಳಿಂದ ಬರುವ ಜನರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ತಜ್ಞರು ತಿಳಿಸಿದ್ದಾರೆ. ಆರ್‍ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಇಲ್ಲದವರನ್ನು ಕಡ್ಡಾಯವಾಗಿ ಒಳಗಡೆ ಬಿಡದಂತೆ ಸೂಚಿಸಲಾಗಿದೆ. ಜತೆಗೆ ಸ್ಥಳದಲ್ಲೇ ಪರೀಕ್ಷೆ ಮಾಡುವಂತೆ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದರು.

ನಿಯಮ‌ ಉಲ್ಲಂಘನೆ ಮಾಡುವ ಸಮಾರಂಭದ ಆಯೋಜಕರು ಹಾಗೂ ಸ್ಥಳದ ಮಾಲೀಕರ ವಿರುದ್ಧವೂ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

ಸಂಪುಟ ಸಭೆಯಲ್ಲೂ ಸಹ ಈ ವಿಚಾರ ಚರ್ಚೆಗೆ ಬಂದಿದೆ. ಲಾಕ್ ಡೌನ್ ಪ್ರಸ್ತಾಪ ಬೇಡ, ಇದರಿಂದ ಜನರ ಮೇಲೆ ಮತ್ತು ಆರ್ಥಿಕ ಚಟುವಟಿಕೆ ಮೇಲೆ ಬೀಳುತ್ತದೆ ಎಂಬ ಬಗ್ಗೆ ಚರ್ಚೆ ನಡೆಯಿತು ಎಂದು ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net