ಇನ್​ಸ್ಟಾಗ್ರಾಂನಲ್ಲಿ 3 ತಿಂಗಳ ಲವ್​: ಪ್ರೀತಿಗೆ ಬಿದ್ದು ಜೀವ ಕಳೆದುಕೊಂಡ ಚಿಂತಾಮಣಿ ವಿದ್ಯಾರ್ಥಿನಿ

love
Published on

ಚಿಕ್ಕಬಳ್ಳಾಪುರ: ಸಾಮಾಜಿಕ ಜಾಲತಾಣದಿಂದ ಪರಿಚಯವಾದ ಯುವಕನ ಜತೆ ಪ್ರೀತಿಗೆ ಬಿದ್ದು ಯುವತಿಯೊಬ್ಬಳು ದಾರುಣವಾಗಿ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಲವ್​ ಫೇಲ್ಯೂರ್​ ಎಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ವಿದ್ಯಾರ್ಥಿನಿ ಪವಿತ್ರಾ!

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಕುರಬೂರು ಸರ್ಕಾರಿ ಕೃಷಿ ಮಹಾವಿದ್ಯಾಲಯದಲ್ಲಿ ಬಿ.ಎಸ್ಸಿ ಅಗ್ರೀಕಲ್ಚರ್ ಓದುತ್ತಿದ್ದ ಪವಿತ್ರಾ ಇನ್​ಸ್ಟಾಗ್ರಾಂನಲ್ಲಿ ಪರಿಚಯವಾದ ಯುವಕನ ಪ್ರೀತಿಯ ಬಲೆಗೆ ಬಿದ್ದು ಜೀವ ಕಳೆದುಕೊಂಡಿದ್ದಾಳೆ. ಕಾಲೇಜಿನ ವಸತಿ ನಿಲಯದಲ್ಲಿಯೇ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ.

ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಮೊಬೈಲ್​ನಲ್ಲಿ ವಿಡಿಯೋ ಮಾಡಿಟ್ಟು ಭಗ್ನಪ್ರೇಮದ ಕುರಿತು ಮಾಹಿತಿ ನೀಡಿದ್ದಾಳೆ. ಜತೆಗೆ ಡೆತ್​ನೋಟ್​ ಕೂಡ ಬರೆದಿಟ್ಟಿದ್ದಾಳೆ.

ಇನ್ಟಾಗ್ರಾಂ ನಲ್ಲಿ ಪರಿಚಯವಾದ ಹುಡಗನ ಜೊತೆ ಲವ್ ಮಾಡಿದ್ದು, ಈಗ ಲವ್​ ಫೇಲ್ಯೂರ್​ ಆಗಿದೆ. ಈ ಹಿನ್ನೆಲೆಯಲ್ಲಿ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿದ್ಯಾರ್ಥಿನಿ ಹೇಳಿದ್ದಾಳೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ದಾಖಲಾಗಿದೆ (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net