

ಮಂಡ್ಯ: ಮೇಲುಕೋಟೆಯಿಂದ ಮಂಡ್ಯಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮಂಡ್ಯ ತಾಲೂಕಿನ ದುದ್ದ ಗ್ರಾಮದ ಬಳಿ ಜಮೀನಿಗೆ ನುಗ್ಗಿ ಸ್ವಲ್ಪದಲ್ಲಿಯೇ ಭಾರಿ ಅನಾಹುತ ತಪ್ಪಿದೆ.
ಚಾಲಕನಿಂದಾಗಿ ಕೂದಲೆಳೆ ಅಂತರದಲ್ಲಿ ಬಸ್ಸಿನಲ್ಲಿದ್ದ 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾರಾಗಿದ್ದಾರೆ. ಮಂಡ್ಯ ತಾಲೂಕಿನ ದುದ್ದ ಗ್ರಾಮದ ಬಳಿ ಘಟನೆ ನಡೆದಿದೆ.
ಮೇಲುಕೋಟೆಯಿಂದ ಮಂಡ್ಯಗೆ ಬಸ್ ಬರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಬಸ್ ಈ ಜಾಗಕ್ಕೆ ಬರುತ್ತಿದ್ದ ವೇಳೆ, ಏಕಾಏಕಿ ಟ್ರ್ಯಾಕ್ಟರ್ ಅಡ್ಡಬಂದಿದೆ. ಅದನ್ನು ತಪ್ಪಿಸಲು ಬಲಭಾಗಕ್ಕೆ ಸ್ಟೇರಿಂಗ್ ತಿರುಗಿಸಿದಾಗ ಬಸ್ ಜಮೀನಿಗೆ ನುಗ್ಗಿದೆ.
ಟ್ರ್ಯಾಕ್ಟರ್ಗೆ ಡಿಕ್ಕಿ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಈ ಅನಾಹುತ ಸಂಭವಿಸಿದೆ. ಸ್ವಲ್ಪದರಲ್ಲೇ ಅಪಘಾತ ತಪ್ಪಿದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಬಸ್ ತುಂಬಾ ವಿದ್ಯಾರ್ಥಿಗಳೇ ತುಂಬಿದ್ದರು. ಘಟನೆಯಿಂದ ಅವರು ಆತಂಕಕ್ಕೆ ಒಳಗಾಗಿದ್ದರು. ಆದರೆ ಅದೃಷ್ಟವಶಾತ್ ಯಾವುದೇ ಹಾನಿಯಾಗಲಿಲ್ಲ.
ವಿಡಿಯೋ ಇಲ್ಲಿದೆ ನೋಡಿ: