ಸಾವಿನಲ್ಲೂ ಒಂದಾದ ಅಮ್ಮ ಮಗ: ಪುತ್ರನ ಸುದ್ದಿ ಕೇಳಿ ಕೊನೆಯುಸಿರೆಳೆದ ತಾಯಿ! ಮಂಡ್ಯದಲ್ಲೊಂದು ದುರಂತ

mandya
Published on

ಮಂಡ್ಯ: ಪ್ರೀತಿಯ ಮಗನ ಸಾವಿನ ಸುದ್ದಿ ಕೇಳುತ್ತಿದ್ದಂತೆ ತಾಯಿಯೂ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಗಿಡುವಿನಹೊಸಹಳ್ಳಿಕೊಪ್ಪಲು ಗ್ರಾಮದಲ್ಲಿ ಈ ಮನಕಲಕುವ ಘಟನೆ ನಡೆದಿದೆ.

ಲಕ್ಷ್ಮಮ್ಮ (70), ಕುಶ (43) ಮೃತಪಟ್ಟ ತಾಯಿ ಮಗ. ಲೋ ಬಿಪಿಯಿಂದ ಮನೆಯಲ್ಲೇ ಮಗ ಕುಶ ಮೃತಪಟ್ಟಿದ್ದರು. ಮಗನ ಸಾವಿನ ಸುದ್ದಿ ಕೇಳಿದ ಐದೇ ನಿಮಿಷದಲ್ಲಿ ತಾಯಿ ಲಕ್ಷ್ಮಮ್ಮ ಕೂಡ ಕೊನೆಯುಸಿರೆಳೆದಿದ್ದಾರೆ.

ಮೃತ ಕುಶ ಅವರು ಬೆಂಗಳೂರಿನಲ್ಲಿ ಸ್ವಂತ ಸ್ಟುಡಿಯೋ ಇಟ್ಟುಕೊಂಡಿದ್ದರು. ಅನಾರೋಗ್ಯದಿಂದಾಗಿ 4 ತಿಂಗಳ ಹಿಂದೆ ಊರಿಗೆ ವಾಪಸ್ಸಾಗಿದ್ದರು. ತಾಯಿ, ಮಗನ ಸಾವಿನಿಂದಾಗಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಶಾಸಕ ಸುರೇಶ್ ಗೌಡ ಮೃತರ ನಿವಾಸಕ್ಕೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. (ದಿಗ್ವಿಜಯ ನ್ಯೂಸ್‌)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net