ಮಂಡ್ಯದ ಅರ್ಚಕರ ಕೊಲೆ ಪ್ರಕರಣ: ₹5 ಲಕ್ಷ ಪರಿಹಾರ ಘೋಷಿಸಿದ ಸಿಎಂ

mandya temple1
Published on

ಬೆಂಗಳೂರು: ಹುಂಡಿಯಲ್ಲಿರುವ ಹಣದ ಆಸೆಗೆ ನಿನ್ನೆ ಮಧ್ಯರಾತ್ರಿ ಮಂಡ್ಯದ ಹೊರವಲಯದ ಶ್ರೀಅರ್ಕೇಶ್ವರ ದೇವಾಲಯದ ಆವರಣದಲ್ಲಿ ನಡೆದಿರುವ ಅರ್ಚಕರು ಹಾಗೂ ಕಾವಲುಗಾರರ ಕೊಲೆ ಪ್ರಕರಣಕ್ಕೆ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪನವರು ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ.

ದೇಗುಲದ ಗೋಪುರ ಮುಖ್ಯದ್ವಾರದ ಸಮೀಪದಲ್ಲಿ ಪ್ರಾಂಗಣದಲ್ಲಿ ಮಲಗಿದ್ದವರ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿರುವ ಬಗ್ಗೆ ವಿಷಾದಿಸಿದ ಮುಖ್ಯಮಂತ್ರಿಗಳು, ಮೃತರ ಕುಟುಂಬಕ್ಕೆ ಸರ್ಕಾರದ ವತಿಯಿಂದ ತಲಾ ಐದು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಯಡಿಯೂರಪ್ಪನವರು, ಮಂಡ್ಯದ ಅರಕೇಶ್ವರ ದೇವಸ್ಥಾನದ ಪೂಜಾರಿಗಳಾಗಿದ್ದ ಗಣೇಶ್, ಪ್ರಕಾಶ್ ಮತ್ತು ಆನಂದ್ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ದೇವಸ್ಥಾನದ ಹುಂಡಿಯನ್ನು ಕಳ್ಳತನ ಮಾಡಿರುವ ವಿಷಯ ತಿಳಿದು ಅತ್ಯಂತ ನೋವಾಗಿದೆ. ಹತ್ಯೆಗೊಳಗಾದ ದೇವಸ್ಥಾನದ ಪೂಜಾರಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ತಪ್ಪಿತಸ್ಥರ ವಿರುದ್ಧ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net