ಮಂಗಳೂರು ಎಸ್​ಎಸ್​ಎಲ್​ಸಿ ಪರೀಕ್ಷಾ ಕೇಂದ್ರದಲ್ಲಿ ಅಗ್ನಿ ಅವಘಡ; ವಿದ್ಯಾರ್ಥಿಗಳು, ಶಿಕ್ಷಕರು ತಲ್ಲಣ

SSCL final
Published on

ಮಂಗಳೂರು: ಇಂದು ಎಸ್​ಎಸ್​ಎಸ್​ಸಿ ಪರೀಕ್ಷೆ ರಾಜ್ಯದ ವಿವಿಧ ಕೇಂದ್ರಗಳಲ್ಲಿ ನಡೆದಿದೆ. ಆದರೆ ಪರೀಕ್ಷೆಗೂ ಮುನ್ನ ಮಂಗಳೂರಿನಲ್ಲಿ ನಡೆದ ಭಾರಿ ದುರಂತವೊಂದು ವಿದ್ಯಾರ್ಥಿಗಳು ಹಾಗೂ ಪಾಲಕರನ್ನು ಬೆಚ್ಚಿಬೀಳಿಸಿದೆ.

ಮಂಗಳೂರು ಹೊರವಲಯದ ಬಬ್ಬುಕಟ್ಟೆಯ ಖಾಸಗಿ ಕಾಲೇಜಿಯಲ್ಲಿ ಈ ಅನಾಹುತ ಸಂಭವಿಸಿದೆ. ಅದೇನೆಂದರೆ ಪರೀಕ್ಷೆ ಆರಂಭಕ್ಕೆ ಅರ್ಧ ಗಂಟೆ ಇದೆ ಎನ್ನುವಾಗ ಕೇಂದ್ರದ ಜೀವಶಾಸ್ತ್ರ ಪ್ರಯೋಗಾಲಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್​ ಸರ್ಕ್ಯೂಟ್​ನಿಂದ ಈ ಅನಾಹುತವಾಗಿದೆ. ಆದರೆ ಅದೃಷ್ಟವಶಾತ್​ ಯಾವುದೇ ಹಾನಿಯಾಗಿಲ್ಲ.

ಕಾಲೇಜಿನ ಬಯೋಲಾಜಿ ಲ್ಯಾಬ್​​ನಲ್ಲಿ ಶಾರ್ಟ್​ ಸರ್ಕ್ಯೂಟ್​ ಸಂಭವಿಸಿದ ತಕ್ಷಣ ಕಾಲೇಜಿನ ಕೋಣೆಯಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿದೆ. ಈ ವೇಳೆ ಎಚ್ಚೆತ್ತ ಸಿಬ್ಬಂದಿ ಪರೀಕ್ಷೆ ಬರೆಯುತ್ತಿದ್ದ 208 ವಿದ್ಯಾರ್ಥಿಗಳನ್ನು ಮೊದಲ ಮಹಡಿಗೆ ಕಳುಹಿಸಿಕೊಟ್ಟು ಅಲ್ಲಿ ಸರಾಗವಾಗಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿದ್ದಾರೆ.

ಅನಿರೀಕ್ಷಿತವಾಗಿ ನಡೆದ ಈ ಘಟನೆ ಕ್ಷಣಕಾಲ ಪರೀಕ್ಷಾ ಕೇಂದ್ರದಲ್ಲಿ ಗೊಂದಲವನ್ನು ಉಂಟು ಮಾಡಿತ್ತು. ಆದರೆ, ಇದರಿಂದ ಯಾವುದೇ ತೊಂದರೆಯಾಗಿಲ್ಲ. ವಿದ್ಯಾರ್ಥಿಗಳಿಗೆ ಆರಾಮವಾಗಿ ಪರೀಕ್ಷೆ ಬರೆಯಲು ವ್ಯವಸ್ಥೆಯನ್ನು ತಕ್ಷಣಕ್ಕೆ ನಡೆಸಲಾಗಿದೆ. ವಿದ್ಯಾರ್ಥಿಗಳು ಕೂಡ ನಿರಾತಂಕವಾಗಿ ಪರೀಕ್ಷೆ ಬರೆದಿದ್ದಾರೆ ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net