ವಿಧಾನಸೌಧಕ್ಕೆ ಬಂದರೂ ಸಚಿವರು ಸಿಗಲ್ಲ: ಶಾಸಕ ಕುಮಾರಸ್ವಾಮಿ ಗರಂ

kumarswamy
Published on

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಸಚಿವರು ವಿಧಾನಸೌಧಕ್ಕೆ ಬರುತ್ತಿಲ್ಲ. ಶಾಸಕರ ಭೇಟಿಗೂ ಸಿಗುತ್ತಿಲ್ಲ. ಸಚಿವರನ್ನು ಭೇಟಿಯಾಗುವುದೇ ದುಸ್ತರವಾಗಿದೆ ಎಂದು ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಾರಕ್ಕೆ ಎರಡು ದಿನ ವಿಧಾನಸೌಧಕ್ಕೆ ಬಂದು ಶಾಸಕರನ್ನು ಭೇಟಿಯಾಗುತ್ತಾರೆ. ಆದರೆ ಸಚಿವರನ್ನು ಭೇಟಿಯಾಗುವುದೆ ದುಸ್ತರವಾಗಿದೆ. ಈ ಹಿಂದೆ ತಮ್ಮ ಸಮಸ್ಯೆಗಳ ನಿವಾರಣೆಗೆ ಸಚಿವರ ಸಭೆಯನ್ನು ಮುಖ್ಯಮಂತ್ರಿಗಳು ನಡೆಸಿ ಪರಿಹರಿಸಿದ್ದರು. ಶೇ 70ರಷ್ಟು ಭಾಗ ಸಚಿವರು ವಿಧಾನ ಸೌಧಕ್ಕೆ ಭೇಟಿ ನೀಡಿ ಶಾಸಕರ ಸಮಸ್ಯೆಗಳನ್ನು ಅಲಿಸುತ್ತಿಲ್ಲ. ನಮ್ಮದೇ ಈ ರೀತಿಯ ಸಮಸ್ಯೆಯಾದರೆ ಪಕ್ಷ ವನ್ನು ಬೇರು ಮಟ್ಟದಲ್ಲಿ ಬೆಳಸಿದ, ಅಧಿಕಾರಕ್ಕೆ ತರುವಲ್ಲಿ ಶ್ರಮಿಸಿದ ಕಾರ್ಯಕರ್ತರ ಗತಿಯೇನು ಎಂದು ಪ್ರಶ್ನಿಸಿದ್ದಾರೆ.

ಅಸಮರ್ಥ ಸಚಿವರನ್ನು ಕೂಡಲೇ ಬದಲಾಯಿಸಬೇಕು ಎಂದು ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net