

ಬೆಳಗಾವಿ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 22ನೇ ಘಟಿಕೋತ್ಸವದಲ್ಲಿ ಒಟ್ಟು 18ಚಿನ್ನದ ಪದಕ ಪಡೆಯುವ ಮೂಲಕ ವಿಟಿಯು ಇತಿಹಾಸದಲ್ಲೇ ಅತಿಹೆಚ್ಚು ಪದಕ ಸಾಧನೆ ಮಾಡಿದ ಕೀರ್ತಿಗೆ ಬೆಂಗಳೂರಿನ
ಎಸ್.ಮುರಳಿ ಭಾಜನರಾದರು.
ಮುರಳಿ ಅವರು 18 ಚಿನ್ನದ ಪದಕ ಪಡೆಯುವ ಮೂಲಕ ಚಿನ್ನದ ಹುಡುಗನಾಗಿ ಹೊರಹೊಮ್ಮಿದ್ದರೆ, ಕುರಂಜಿ ವೆಂಕಟರಮನ್ ಗೌಡ ಕಾಲೇಜು ಆಫ್ ಎಂಜಿನಿಯರಿಂಗ್‌ನ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಎಸ್.ಕೃತಿ 8 ಚಿನ್ನದ ಪದಕ, ಬೆಂಗಳೂರು ಎ.ಸಿ.ಎಸ್. ಕಾಲೇಜ್ ಆಫ್ ಎಂಜಿನಿಯರಿಂಗ್ ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಶನ್ ಎಂಜಿನಿಯರಿಂಗ್ ವಿಭಾಗದ ಎಸ್.ಸ್ವಾತಿ 7 ಚಿನ್ನದ ಪದಕ ಮುಡಿಗೇರಿಸಿಕೊಂಡಿರು.
ಅದೇ ರೀತಿ, ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ವಿಭಾಗದ ಎಸ್.ವಿ.ಸುಶ್ಮಿತಾ 6 ಚಿನ್ನದ ಪದಕ, ಬಿ.ಎನ್.ಎಂ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ಆ್ಯಂಡ್ ಎಂಜಿನಿಯರಿಂಗ್ ವಿಭಾಗದ ಪೂಜಾ ಬಾಸ್ಕೇರ 6, ಬೆಂಗಳೂರಿನ ಆರ್.ಎನ್.ಎಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಎಲೆಕ್ಟ್ರಾನಿಕ್ಸ್ ಆ್ಯಂಡ್ ಇನ್‌ಸ್ಟ್ರುಮೆಂಟೇಷನ್ ವಿಭಾಗದ ಎಂ.ಅಭಿಲಾಷ 4, ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇನ್ಫರ್ಮೇಷನ್ ಸೈನ್ಸ್ ಆ್ಯಂಡ್ ಎಂಜಿನಿಯರಿಂಗ್ ವಿಭಾಗದ ಯುವಿಕಾ ರಮೇಶ್‌ಬಾಬು 4, ಆರ್.ಎನ್.ಎಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಎಂಬಿಎ ವಿಭಾಗದ ಜೆ.ಹರ್ಷವರ್ಧಿನಿ 4, ಬಿಎಂಎಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಯು.ಕೆ.ಅರ್ಜುನ್ 3 ಹಾಗೂ ದಾವಣಗೆರೆ ಯುಬಿಟಿಡಿ ಕಾಲೇಜ್ ಆಫ್ ಎಂಜಿನಿಯರಿಂಗ್‌ನ ಎಂ.ಟೆಕ್ ವಿಭಾಗದ ಜಿ.ಆರ್.ಸಂಗೀತ 2 ಚಿನ್ನದ ಪದಕ ಪಡೆದರು.