ಆರ್‌.ಆರ್.ನಗರ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ

kusuma
Published on

ಬೆಂಗಳೂರು :ಆರ್‌.ಆರ್‌ ನಗರ ಉಪಚುನಾವಣೆ ಕಾವು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಐಎಎಸ್ ಅಧಿಕಾರಿಯಾಗಿದ್ದ ಡಿ.ಕೆ ರವಿ ಪತ್ನಿ ಕುಸುಮಾ ಅವರು ಕಳೆದ ಭಾನುವಾರ ಕಾಂಗ್ರೆಸ್​ ಪಕ್ಷ ಸೇರ್ಪಡೆಗೊಂಡಿದ್ದರು. ಇದೀಗ ನಿರೀಕ್ಷೆಯಂತೆ ಅವರನ್ನು ಆರ್​.ಆರ್​.ನಗರ ಕಾಂಗ್ರೆಸ್​ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ.

ಅಧಿಕೃತವಾಗಿ ಇಂದು ಸಂಜೆ ಪ್ರಕಟಿಸುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಜರಾಜೇಶ್ವರಿನಗರ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕುಸುಮಾ ಹೆಸರನ್ನು ಮಾತ್ರವೇ ಕಾಂಗ್ರೆಸ್ ಹೈಕಮಾಂಡ್​ಗೆ ಶಿಫಾರಸು ಮಾಡಲಾಗಿದೆ. ಹೈಕಮಾಂಡ್ ಒಪ್ಪಿಗೆಯ ಮುದ್ರೆಯೊಂದಿಗೆ ಸಂಜೆ ನಮಗೆ ತಲುಪುವ ನಿರೀಕ್ಷೆ ಇದೆ. ಹೀಗಾಗಿ ರಾಜರಾಜೇಶ್ವರಿನಗರ ಉಪ ಚುನಾವಣೆಗೆ ಕುಸುಮ ನಮ್ಮ ಪಕ್ಷದಿಂದ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವುದು ಬಹುತೇಕ ಖಚಿತವಾದಂತೆ. ಇಂದು ಸಂಜೆ ಅಧಿಕೃತವಾಗಿ ಘೋಷಣೆ ಮಾಡಲಾಗುವುದು ಎಂದು ತಿಳಿಸಿದರು.

ಕಳೆದ ಭಾನುವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ವತ್ವವನ್ನು ಕುಸುಮಾ ಪಡೆದುಕೊಂಡರು. ಜೆಡಿಎಸ್ ಮುಖಂಡ ಹನುಮಂತರಾಯಪ್ಪ ಕೂಡಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯತ್ವವನ್ನು ನೀಡಲಾಗಿತ್ತು.

ಅದಾಗಲೇ ಇವರಿಗೆ ಆರ್‌ಆರ್‌ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧೆ ನಡೆಸಲು ಕಾಂಗ್ರೆಸ್ ಟಿಕೆಟ್‌ ನೀಡುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net