ಯೂಕ್ರೇನ್​ನಲ್ಲಿ ಗುಂಡೇಟಿಗೆ ಬಲಿಯಾದ ನವೀನ್ ದೇಹ ಪತ್ತೆ: ಸಿಎಂ ಬೊಮ್ಮಾಯಿ‌ ಮಾಹಿತಿ

naveen
Published on

ಬೆಂಗಳೂರು: ಯೂಕ್ರೇನ್ ನ ಯುದ್ಧ ಭೂಮಿಯಲ್ಲಿ ಹುತಾತ್ಮರಾದ ಕನ್ನಡಿಗ ವೈದ್ಯ ವಿದ್ಯಾರ್ಥಿ ನವೀನ್ ಶವ ಪತ್ತೆಯಾಗಿದ್ದು, ಅಲ್ಲಿನ ಶವಾಗಾರದಲ್ಲಿ ಸಂರಕ್ಷಸಿಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಮಾಹಿತಿ ನೀಡಿದರು.

ಆರ್ ಟಿ.ನಗರದ ತಮ್ಮ ನಿವಾಸದ ಬಳಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು ವಿದೇಶಾಂಗ ಸಚಿವ ಎಸ್.ಜೈಶಂಕರ್ ಈ ವಿಷಯ ತಿಳಿಸಿದ್ದಾರೆ. ಸದ್ಯಕ್ಕೆ ಷೆಲ್ ದಾಳಿ ಮುಂದುವರಿದಿದೆ. ಹೀಗಾಗಿ ಅಲ್ಲಿನ ಶವಾಗಾರದ ಅಧಿಕಾರಿಗಳ ಜತೆಗೆ ಭಾರತೀಯ ರಾಯಭಾರಿ ಕಚೇರಿ ಅಧಿಕಾರಿಗಳು ಸಂಪರ್ಕದಲ್ಲಿದ್ದು, ಪರಿಸ್ಥಿತಿ ತಿಳಿಯಾದ ಬಳಿಕ ನವೀನ್ ಶವ ತರಿಸಿಕೊಳ್ಳಲು ಪ್ರಯತ್ನಿಸಲಾಗುವುದು ಎಂದು ಸಿಎಂ ಬೊಮ್ಮಾಯಿ‌ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net