ಸ್ಟ್ರಿಕ್ಟ್​ ನೈಟ್​ ಕರ್ಫ್ಯೂ ಜಾರಿ: ರಸ್ತೆಗಿಳಿಯೋ ಮುನ್ನ ಎಚ್ಚರ- ನಿಯಮಗಳೇನು?

curfew
Published on

ಬೆಂಗಳೂರು: ನಗರದಲ್ಲಿ ಕರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂವನ್ನು ಬಿಗಿಗೊಳಿಸಲು ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಮುಂದಾಗಿದೆ. ನೈಟ್​ ಕರ್ಫ್ಯೂ ಈಗ ಜಾರಿಯಲ್ಲಿ ಇದ್ದರೂ ಬೆಂಗಳೂರಿಗರು ಡೋಂಟ್​ ಕೇರ್​ ಎನ್ನುತ್ತಿರುವ ಹಿನ್ನೆಲೆಯಲ್ಲಿ ಕರೊನಾ ಸೋಂಕಿನ ಪ್ರಮಾಣ ಹೆಚ್ಚುತ್ತಲೇ ಸಾಗಿದೆ.

ಇದೆ ಕಾರಣಕ್ಕೆ ಕಠಿಣ ನಿಯಮವನ್ನು ರೂಪಿಸಲು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಸರ್ಕಾರ ಮುಂದಾಗಿದೆ. ಆದ್ದರಿಂದ  ಪುನಃ ರಾತ್ರಿ ಕರ್ಫ್ಯೂ ಶುರುವಾಗಲಿದೆ. ಪ್ರತಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಈ ಕರ್ಫ್ಯೂ ಜಾರಿಯಲ್ಲಿ ಇರಲಿದೆ.

ಇಷ್ಟು ದಿನಗಳ ಕಾಲ ನೈಟ್ ಕರ್ಫ್ಯೂ ಇದ್ದರೂ ಸರಿಯಾಗಿ ಪಾಲನೆ ಆಗುತ್ತಿರಲಿಲ್ಲ. ಆದ್ದರಿಂದ ಅನಗತ್ಯವಾಗಿ ಓಡಾಡಿದರೆ, ರಸ್ತೆಗಿಳಿದರೆ ದಂಡ ಪ್ರಯೋಗ ಮಾಡಲಾಗುತ್ತದೆ. ಜತೆಗೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕೇಸ್‌ ದಾಖಲಿಸುವುದಾಗಿ ಅಧಿಕಾರಿಗಳು ಎಚ್ಚರಿಸಿದ್ದಾರೆ.

ಯಾರಿಗೆ ಯಾವುದಕ್ಕೆ ವಿನಾಯಿತಿ?

* ರೋಗಿಗಳನ್ನ ಕರೆದೊಯ್ಯುವಾಗ ಸಂಬಂಧಪಟ್ಟವರಿಗೆ ಮಾತ್ರ ಅವಕಾಶ

* ಯಾವುದೇ ಕಂಪನಿ ಹಾಗೂ ಕೈಗಾರಿಕಾ ಉದ್ಯೋಗಿಗಳು ಪಾಸ್ ಹೊಂದಿರಬೇಕು

* ಟೆಲಿಕಾಂ ಹಾಗೂ ಇಂಟರ್ನೆಟ್ ಸರ್ವೀಸಸ್ ವರ್ಕರ್ಸ್ ಐಡಿಕಾರ್ಡ್ ಹೊಂದಿರಬೇಕು

* ಮೆಡಿಕಲ್ ಎಮರ್ಜೆನ್ಸಿ ಹಾಗೂ ಅಗತ್ಯ ಸರಬರಾಜುವಾಹನಗಳಿಗೆ ಅವಕಾಶ

* ಅಗತ್ಯ ಸರಕು ಸಾಗಾಟ ವಾಹನಗಳಿಗೆ ಅವಕಾಶ

* ಏರ್​ಪೋರ್ಟ್​, ರೈಲ್ವೆ ಸೇರಿದಂತೆ ಓಡಾಟಕ್ಕೆ ಸೂಕ್ತ ಮಾಹಿತಿ‌ ಒದಗಿಸಬೇಕು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net