

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ 4.30ಕ್ಕೆ ಬಿಡುಗಡೆಯಾಗಿದೆ. ಎಸ್ಎಸ್ಎಲ್ಸಿ ಹಾಗೂ ಪ್ರಥಮ ಪಿಯುಸಿ ಆಧಾರದ ಮೇಲೆ ಫಲಿತಾಂಶವನ್ನು ಘೋಷಣೆ ಮಾಡಲಾಗಿದೆ.
ಈ ಬಾರಿ 6,66, 497 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಮಾರ್ಗದರ್ಶಿ ಸೂತ್ರದ ಮೂಲಕ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಎಸ್ಎಸ್ಎಲ್ಸಿ ಮತ್ತು ಪ್ರಥಮ ಪಿಯುಸಿ ಅಂಕಗಳು ಹಾಗೂ ಇಂಟರ್ನಲ್ ಅಸೆಸ್ಮೆಂಟ್ ಪರಿಗಣಿಸಿ ಫಲಿತಾಂಶ ನೀಡಲಾಗುತ್ತದೆ. ಮೊಬೈಲ್ ಮೂಲಕ ಇದಾಗಲೇ ಫಲಿತಾಂಶದ ಎಸ್ಎಂಎಸ್ ಕಳುಹಿಸಲಾಗಿದೆ.
ಯಾವುದೇ ಗೊಂದಲಕ್ಕೆ ಆಸ್ಪದವಿಲ್ಲದೇ ವ್ಯವಸ್ಥಿತವಾಗಿ ಫಲಿತಾಂಶ ನೀಡಲಾಗಿದೆ. ಈ ಬಾರಿ ಯಾವುದೇ ಶ್ರೇಯಾಂಕ ನೀಡಿಲ್ಲ. ಅಂಕಗಳ ಆಧಾರದ ಮೇಲೆಯೇ ಸಿಬಿಎಸ್‌ಇ ಮಾದರಿಯಲ್ಲಿ ಎಸ್‌ಎಸ್‌ಎಲ್ ಸಿ ಹಾಗೂ ಪ್ರಥಮ ಪಿಯುಸಿ ಅಂಕ ಆಧರಿಸಿ ಫಲಿತಾಂಶ ಪ್ರಕಟಿಸಲಾಗಿದೆ. 3,35,138 ವಿದ್ಯಾರ್ಥಿಗಳು, 3,31,359 ವಿದ್ಯಾರ್ಥಿನಿಯರು ತೇರ್ಗಡೆ ಹೊಂದಿದ್ದಾರೆ.4,50,706 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಆಗಿದ್ದಾರೆ. 14,7055 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಹಾಗೂ 68,729 ವಿದ್ಯಾರ್ಥಿಗಳು ಜಸ್ಟ್ ಪಾಸ್ ಆಗಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.
ಈಗಾಗಲೇ ಫಲಿತಾಂಶಕ್ಕೆ ಅಗತ್ಯವಾಗಿರುವ ನೋಂದಣಿ ಸಂಖ್ಯೆಯನ್ನು ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ಗಳಿಗೆ ನೀಡಲಾಗಿದೆ. ಒಂದು ವೇಳೆ ಸಂಖ್ಯೆ ಸಿಗದವರು http://pue.kar.nic.in ಇಲ್ಲಿ ಕ್ಲಿಕ್ ಮಾಡಿ know my registration number ಮೂಲಕ ನೋಡಬಹುದು.
ಆಯಾ ಕಾಲೇಜುಗಳಿಗೆ ಫಲಿತಾಂಶದ ವಿವರದ ಪಟ್ಟಿ ಹೋಗಲಿದೆ. ಫಲಿತಾಂಶದ ಮುನ್ನ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಖಚಿತ ಪಡಿಸಿಕೊಂಡು, ಜನರೇಟ್ ಆದ ರಿಜಿಸ್ಟರ್ ನಂಬರ್ ಪರಿಶೀಲಿಸಿ ಫಲಿತಾಂಶವನ್ನು ನೋಡಬಹುದಾಗಿದೆ. ವೆಬ್ಸೈಟ್ ವಿವರ: http://karresults.nic.in