

ಬೆಂಗಳೂರು: ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಕುಟುಂಬಕ್ಕೆ ಮತ್ತೊಂದು ಬರಸಿಡಿಲು ಬಡಿದಿದೆ. ಪತಿಯ ಸಾವಿನಿಂದ ಈಗತಾನೇ ಚೇತರಿಸಿಕೊಳ್ಳುತ್ತಿದ್ದ ಅವರ ಪತ್ನಿ ಅಶ್ವಿನಿ ಅವರಿಗೆ ಮತ್ತೊಂದು ಆಘಾತ ಉಂಟಾಗಿದೆ. ಅವರ ತಂದೆ ಭಾಗಮನೆ ರೇವನಾಥ್ (78) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಅವರು ನಿಧನ ಹೊಂದಿದ್ದಾರೆ.
ಎನ್ಎಚ್ಎಐ ಮುಖ್ಯ ಇಂಜಿನಿಯರ್ ಆಗಿ ರೇವನಾಥ್ ಕೆಲಸ ಮಾಡಿದ್ದರು. ಹೃದಯ ಸಮಸ್ಯೆಯಿದ್ದ ಹಿನ್ನೆಲೆಯಲ್ಲಿ ರೇವನಾಥ್ ಅವರಿಗೆ ಸುಮಾರು 20 ವರ್ಷಗಳ ಹಿಂದೆ ಆ್ಯಂಜಿಯೋಪ್ಲಾಸ್ಟಿ ಮಾಡಲಾಗಿತ್ತು. ಅಳಿಯ ಪುನೀತ್ ಸಾವಿನ ನಂತರ ತುಂಬಾ ನೊಂದುಕೊಂಡಿದ್ದ ಅವರು ತೀವ್ರ ಒತ್ತಡಕ್ಕೆ ಒಳಗಾಗಿದ್ದರು ಎನ್ನಲಾಗಿದೆ.