ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಲು ಎಸ್.ಆರ್. ಹಿರೇಮಠ್ ಆಗ್ರಹ

07022022 SR Hiremath
Published on

ಮೈಸೂರು: ರೈತರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಕೂಡಲೇ ಕರ್ನಾಟಕ ಭೂ ಸುಧಾರಣಾ (ತಿದ್ದುಪಡಿ) ಕಾಯ್ದೆ-2020 ಹಾಗೂ ಕರ್ನಾಟಕ ಜಾನುವಾರು ಹತ್ಯಾ ನಿಷೇಧ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ-2020ಅನ್ನು ರದ್ದು ಮಾಡಬೇಕು ಎಂದು ಸಿಟಿಜನ್ ಫಾರ್ ಡೆಇಮಾಕ್ರಸಿ ಅಧ್ಯಕ್ಷ ಎಸ್.ಆರ್. ಹಿರೇಮಠ್ ಆಗ್ರಹಿಸಿದರು.

ಸರ್ಕಾರ ಎಪಿಎಂಸಿ (ತಿದ್ದುಪಡಿ) ಕಾಯ್ದೆ 2020 ರದ್ದುಪಡಿಸಿರುವುದು ಸ್ವಾಗತಾರ್ಹ. ಇದೇ ರೀತಿ ಉಳಿದ ಜನವಿರೋಧಿ ಕಾಯ್ದೆಗ ಳನ್ನೂ ರದ್ದುಪಡಿಸಿ ರಾಜ್ಯವನ್ನು ಈ ಹಿಂದಿನ ಪರಿಸ್ಥಿತಿಗೆ ಮರಳಿ ತರಬೇಕು. ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಜನವಿರೋಧಿ ಕಾಯ್ದೆಗಳ ವಿರುದ್ಧ ರಾಜ್ಯಾದ್ಯಂತ ವಿವಿಧ ಪ್ರಗತಿಪರ ಸಂಘಟನೆಗಳೊಂದಿಗೆ ಹೋರಾಟ ನಡೆಸಲಾಗಿತ್ತು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಲೋಕಸಭಾ ಚುನಾವಣೆ ಹಾಗೂ ದೇಶದ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕೋಮುವಾದಿ ಬಿಜೆಪಿಯನ್ನು ಸೋಲಿಸಲು ಜನಾಂದೋಲನ ರೂಪಿಸಲು ವಿವಿಧೆಡೆ ಸಭೆಗಳನ್ನು ಆಯೋಜಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಪ್ರಗತಿಪರ ಚಿಂತಕರಾದ ರಾಘವೇಂದ್ರ ಕುಷ್ಟಗಿ, ಅಭಿರುಚಿ ಗಣೇಶ್, ಉಗ್ರನರಸಿಂಹೇಗೌಡ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net