ಹೈಸ್ಕೂಲ್​ ಮಕ್ಕಳಿಗೆ ಇಲ್ಲಿದೆ ಮಹತ್ವದ ಮಾಹಿತಿ: ಸಂವೇದಾ ಇ-ಕ್ಲಾಸ್​ ವೇಳೆ ಬದಲು

samveda
Published on

ಬೆಂಗಳೂರು: ಕರೊನಾ ಹಿನ್ನೆಲೆಯಲ್ಲಿ ಶಾಲೆಗಳು ಇದುವರೆಗೂ ಆರಂಭವಾಗಿಲ್ಲ. ಇದೇ ಕಾರಣಕ್ಕೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ವತಿಯಿಂದ ಕೆಲವು ತಿಂಗಳಿನಿಂದ ಚಂದನ ವಾಹಿನಿಯಲ್ಲಿ ಹೈಸ್ಕೂಲ್​ ವಿದ್ಯಾರ್ಥಿಗಳಿಗಾಗಿ ಸಂವೇದಾ ಇ-ಕ್ಲಾಸ್ ನಡೆಸಲಾಗುತ್ತಿದೆ.

ರಾಜ್ಯದ 8, 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಕಳೆದ ಆಗಸ್ಟ್​ನಿಂದ ಈ ಯೋಜನೆ ಶುರು ಮಾಡಲಾಗಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ 8,9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗಾಗಿ ಇದನ್ನು ಆರಂಭಿಸಲಾಗಿದೆ.

ನಾಳೆಯಿಂದ ಎಂದರೆ ಡಿಸೆಂಬರ್​ 7ರಿಂದ ಕಲಿಕಾ ಕಾರ್ಯಕ್ರಮದ ಸಮಯದಲ್ಲಿ ಬದಲಾವಣೆಯಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ವಿಧಾನಮಂಡಲ ಅಧಿವೇಶನ ನಡೆಯುವ ಹಿನ್ನೆಲೆಯಲ್ಲಿ ತರಗತಿಗಳ ಪ್ರಸಾರ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ನಾಳೆಯಿಂದ ಈ ತರಗತಿಗಳು ದೂರದರ್ಶನ ಚಂದನ ವಾಹಿನಿಯಲ್ಲಿ ಬೆಳಗ್ಗೆ 7 ಗಂಟೆಯಿಂದ 10.30 ಹಾಗೂ ಸಂಜೆ 5 ಗಂಟೆಯಿಂದ 6.30 ರವರೆಗೆ ಪ್ರಸಾರವಾಗಲಿವೆ. ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ವಿಷಯವಾರು ತರಗತಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಕನ್ನಡ, ಉರ್ದು, ಇಂಗ್ಲಿಷ್ , ಗಣಿತ, ವಿಜ್ಞಾನ, ಸಮಾಜ ಸಂಸ್ಕೃತ ಮತ್ತು ಹಿಂದಿ ಪ್ರಥಮ ಭಾಷೆ ತರಗತಿಗಳನ್ನು ಪ್ರಸಾರ ಮಾಡಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net