

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟಿ ಸಂಜನಾ ಗಲ್ರಾನಿ ತಾತ್ಕಾಲಿಕವಾಗಿ ನಿಟ್ಟುಸಿರು ಬಿಡುವಂಥ ಆದೇಶವೊಂದು ಹೈಕೋರ್ಟ್ ನೀಡಿದೆ. ತಮಗೆ ಅನಾರೋಗ್ಯವಿದ್ದು, ಆರೋಗ್ಯ ತಪಾಸಣೆಗೆ ಅನುಮತಿ ನೀಡಬೇಕು ಎಂದು ಕೋರಿರುವ ಅರ್ಜಿಯನ್ನು ಮಾನ್ಯ ಮಾಡಿರುವ ಕೋರ್ಟ್, ಅವರ ಆರೋಗ್ಯ ತಪಾಸಣೆಗೆ ಅನುಮತಿ ನೀಡಿದೆ.
ವೈದ್ಯಕೀಯ ತಪಾಸಣೆಗೆ ನಡೆಸಿ, ಡಿಸೆಂಬರ್ 10ರೊಳಗೆ ವರದಿ ಸಲ್ಲಿಸುವಂತೆ ನ್ಯಾಯಮೂರ್ತಿಗಳು ಆದೇಶಿಸಿದ್ದಾರೆ. ಇದೇ ವೇಳೆ ಆರೋಗ್ಯ ತಪಾಸಣೆಗೆ ಮಾಧ್ಯಮಗಳ ಚಿತ್ರೀಕರಣಕ್ಕೆ ಅವಕಾಶ ಕೊಡಬಾರದು ಎಂದು ಕೋರ್ಟ್ ಸ್ಪಷ್ಟಪಡಿಸಿದೆ.
ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಯಲ್ಲಿ ಸಂಜನಾ ಆರೋಗ್ಯ ತಪಾಸಣೆ ನಡೆಸಿ, ಆ ಬಗ್ಗೆ ಸಂಪೂರ್ಣ ವರದಿಯನ್ನು ಡಿಸೆ.ಬರ್ 10ರ ಒಳಗೆ ನೀಡಬೇಕು ಎಂದು ಕೋರ್ಟ್ ಹೇಳಿದೆ.
ಇದರಿಂದಾಗಿ ಕಳೆದ ಮೂರು ತಿಂಗಳಿನಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿರುವ ಸಂಜನಾ ಮೂರು ತಿಂಗಳ ಬಳಿಕ ಜೈಲಿನಿಂದ ಹೊರಪ್ರಪಂಚ ನೋಡುವಂತಾಗಿದೆ. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇವರನ್ನು ಕಳೆದ ಸೆಪ್ಟೆಂಬರ್ 8ರಂದು ಸಂಜನಾ ಗಲ್ರಾನಿಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.