ಹಿಜಾಬ್‌ ವಿವಾದ: 22ರವರೆಗೆ ಶಾಲಾ ಕಾಲೇಜಿನ 200 ಮೀಟರ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ- ಪೊಲೀಸ್‌ ಕಮಿಷನರ್‌

order
Published on

ಬೆಂಗಳೂರು: ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಗೆ ಬರುವ ಶಾಲಾ-ಕಾಲೇಜುಗಳ ಸುತ್ತಲೂ 200 ಮೀಟರ್​​​​ವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಈ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್‌ ಪಂತ್ ಆದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ ಜಾರಿಗೆ ಬರುವಂತೆ ಫೆಬ್ರುವರಿ 22ರವರೆಗೆ ನಾಲ್ಕು ಜನರಿಗಿಂತ ಹೆಚ್ಚು ಜನರು ಸೇರುವಂತಿಲ್ಲ. ಒಂದು ವೇಳೆ ಕಾನೂನು ಉಲ್ಲಂಘನೆ‌ ಕಂಡುಬಂದರೆ‌ ಕ್ರಮ‌ ಕೈಗೊಳ್ಳಲಾಗುವುದು ಎಂದು ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.

ನಗರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ನಡೆಯದಂತೆ‌ ಮುಂಜಾಗ್ರತ ಕ್ರಮವಾಗಿ ನಗರದಲ್ಲಿರುವ ಶಾಲಾ-ಕಾಲೇಜು ಹಾಗೂ ಇನ್ನಿತರ ಶೈಕ್ಷಣಿಕ ಸಂಸ್ಥೆಗಳ‌ ಮುಂದೆ ನಾಲ್ಕು ಜನರಿಗಿಂತ ಹೆಚ್ಚು ಜನರು ಸೇರುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net