ಶಾಲೆ, ಪಿಯು ಆರಂಭಕ್ಕೆ ಸಿಕ್ತು ಗ್ರೀನ್​ ಸಿಗ್ನಲ್​- ನೈಟ್​ ಕರ್ಫ್ಯೂ ಸಮಯದಲ್ಲೂ ವ್ಯತ್ಯಾಸ: ಇಲ್ಲಿದೆ ಡಿಟೇಲ್ಸ್​

School
Published on

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲು ಗ್ರೀನ್​ ಸಿಗ್ನಲ್​ ಸಿಕ್ಕಿದೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದಿರುವ ಕರೊನಾ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಇದೇ 23ರಿಂದ 9,10,11,12 ತರಗತಿಗಳನ್ನು ನಡೆಸಲು ತೀರ್ಮಾನಿಸಲಾಗಿದೆ. 2ನೇ ಹಂತದಲ್ಲಿ 6, 7 ಮತ್ತು 8ನೇ ತರಗತಿ ಆರಂಭಿಸಲಾಗುವುದು. ಕರೊನಾ ಪರಿಸ್ಥಿತಿ ಅವಲೋಕಿಸಿ ಆಗಸ್ಟ್ ಕೊನೆಯ ವಾರದಲ್ಲಿ ಒಂದರಿಂದ 8ನೇ ತರಗತಿಗಳ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ಸಿಎಂ ಹೇಳಿದ್ದಾರೆ. ದಿನ ಬಿಟ್ಟು ದಿನ ತರಗತಿಗಳು ನಡೆಸಲು ಒಪ್ಪಿಗೆ ಸಿಕ್ಕಿದ್ದು, ವಿವರ ಮಾರ್ಗಸೂಚಿ ಇಂದೇ ಹೊರಡಿಸಲಾಗುವುದು ಎಂದಿದ್ದಾರೆ.

ಕೇರಳ ಹಾಗೂ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿ ಇರಲಿದೆ. ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ಅವಧಿ ರಾತ್ರಿ 9 ರಿಂದ ಬೆಳಗ್ಗೆ 5ರವರೆಗೆ ನಿಗದಿ ಮಾಡಲಾಗಿದೆ. ಸದ್ಯ ಇದು 10 ಗಂಟೆಯಿಂದ 5 ಗಂಟೆಯವರೆಗೆ ಇದೆ.

ಶ್ರಾವಣ ಮಾಸ ಆರಂಭದಿಂದ ಸಾಲು ಸಾಲು ಹಬ್ಬಗಳು ಬರ್ತಿರುವ ಹಿನ್ನೆಲೆಯಲ್ಲಿ ಮಾರುಕಟ್ಟೆ ಪ್ರದೇಶ ಸೇರಿದಂತೆ ಇತರೆಡೆ ಜನರ ಗುಂಪುಗೂಡುವಿಕೆ ತಡೆಯುವಂತೆ ತಜ್ಞರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net