

ಬೆಂಗಳೂರು: ಇದಾಗಲೇ ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರನ್ನು ತಲುಪಿದ್ದು ಕೆಲವು ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ.
ಈ ನಡುವೆಯೇ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಧಾನಿಯವರನ್ನು ಟೀಕಿಸಿ ಕೆಲವೊಂದು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. #Answermadi Modi ಹ್ಯಾಶ್ ಟಾಗ್ ಮಾಡಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ ಈ ಪ್ರಶ್ನೆಗಳಿಗೆ ಉತ್ತರಿಸಿ ಎಂದಿದ್ದಾರೆ.
ಸಿದ್ದರಾಮಯ್ಯ ಕೇಳಿರುವ ಪ್ರಶ್ನೆಗಳು ಏನು?
* ಬೆಂಗಳೂರು ಉಪನಗರ ರೈಲು ಯೋಜನೆ ನನೆಗುದಿಗೆ ಬೀಳಲು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಕಾರಣವೇ
*ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕೇಳಿಬಂದ ಶೇ.40ರಷ್ಟು ಕಮಿಷನ್ ಆರೋಪ ಬಗ್ಗೆ ತನಿಖೆ ಯಾವಾಗ?
*ಜಿಎಸ್ ಟಿ ಪರಿಹಾರ ಮೂರು ವರ್ಷ ಮುಂದುವರಿಸಬೇಕೆಂದು ಕೇಳಿದ್ದಕ್ಕೆ ನಿಮ್ಮ ಉತ್ತರವೇನು, ಜಿಎಸ್ ಟಿ ಪರಿಹಾರ ರಾಜ್ಯದ ಜನರ ಮೇಲೆ ಹೊರೆಯಲ್ಲವೇ, ಜಿಎಸ್ಟಿ ಜಾರಿ, ಕರೊನಾದಿಂದ, ನೋಟು ಅನಾಣ್ಯೀಕರಣದಿಂದ ಉದ್ಯೋಗ ಕಳೆದುಕೊಂಡಿದ್ದಕ್ಕೆ ಯಾರು ಹೊಣೆ?
*ಕರ್ನಾಟಕದಿಂದ ಇಷ್ಟೊಂದು ತೆರಿಗೆ ಸಂಗ್ರಹವಾಗುತ್ತಿದ್ದರೂ ಕೇಂದ್ರದಿಂದ ರಾಜ್ಯಕ್ಕೆ ಏಕೆ ಕಡಿಮೆ ಕೊಡುಗೆ ಬರುತ್ತಿದೆ ಹೀಗೆ ಸಾಲು ಸಾಲು ಪ್ರಶ್ನೆಗಳನ್ನು ಕೇಳಿ ಅದಕ್ಕೆಲ್ಲಾ ಉತ್ತರಿಸಿ
* ಹಿಂದಿ ಭಾಷೆಯನ್ನು ಹೇರಲು ಹೊರಟಿರುವ ಸಂದರ್ಭದಲ್ಲಿ ಕನ್ನಡದ ಅತ್ಮಿತೆ ಬಗ್ಗೆ ನಿಮ್ಮ ನಿಲುವೇನು?
*ಅಮಿತ್ ಶಾ ಅವರ ಹಿಂದಿ ಹೇರಿಕೆಗೆ ನಿಮ್ಮ ಮೌನವೇಕೆ?
*ಬೆಂಗಳೂರು ಸುತ್ತಮುತ್ತ ಭಾಗಗಳಿಗೆ ನೀರುಣಿಸುವ ಮೇಕೆದಾಟು ಯೋಜನೆ ಜಾರಿಗೆ ವಿಳಂಬವೇಕೆ?
* ರಾಜ್ಯ ಸರ್ಕಾರವೇಕೆ ಕರಾಳ ಕೃಷಿ ಕಾಯ್ದೆಯನ್ನು ರದ್ದುಪಡಿಸಿಲ್ಲ, ಬೆಂಗಳೂರು ಉಪನಗರ ರೈಲು ಯೋಜನೆಗೆ ಶೇ.20ರಷ್ಟು ವೆಚ್ಚವನ್ನು ಕೇಂದ್ರ ಸರ್ಕಾರ ನೀಡಿದೆಯೆ?