ಎಸ್‌ಎಸ್‌ಎಲ್‌ಸಿ ರಿಸಲ್ಟ್‌ ಬೆನ್ನಲ್ಲೇ ಪೂರಕ ಪರೀಕ್ಷೆ ದಿನಾಂಕವೂ ಬಂತು: ಯಾರೆಲ್ಲಾ ಪರೀಕ್ಷೆ ಬರೆಯಬಹುದು? ಇಲ್ಲಿದೆ ಡಿಟೇಲ್ಸ್‌

SSLC1
Published on

ಬೆಂಗಳೂರು: ಇಂದು ಎಸ್ಎಸ್ಎಲ್​ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಕೆಲ ವಿದ್ಯಾರ್ಥಿಗಳು ಕಡಿಮೆ ಅಂಕ ಗಳಿಸಿದ್ದರೆ, ಇನ್ನು ಕೆಲವರಿಗೆ ಪರೀಕ್ಷೆ ಬರೆಯಲು ಸಾಧ್ಯವಾಗಿರಲಿಲ್ಲ. ಇನ್ನು ಕೆಲವರು ಹಿಂದಿನ ವರ್ಷಗಳಲ್ಲಿ ತೇರ್ಗಡೆಯಾಗಿರಲಿಲ್ಲ. ಇವರಿಗೆಲ್ಲ ಅನುಕೂಲ ಆಗುವ ನಿಟ್ಟಿನಲ್ಲಿ ಪೂರಕ ಪರೀಕ್ಷೆಯ ದಿನಾಂಕ ಪ್ರಕಟಿಸಲಾಗಿದೆ.

ಜೂನ್ 27ರಿಂದ ಜುಲೈ 4ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ. ಆನ್​ಲೈನ್ ಮೂಲಕ ಕೂಡ ನೋಂದಾಯಿಸಲು ಅವಕಾಶ ಕಲ್ಪಿಸಲಾಗಿದ್ದು, ಮೇ 30ರವರೆಗೆ ಅವಕಾಶ ಕಲ್ಪಿಸಲಾಗಿದೆ. ಬೆಳಗ್ಗೆ 10:30ರಿಂದ 1:45ರ ತನಕ ಪರೀಕ್ಷೆ ನಡೆಯಲಿದೆ. ಪ್ರತಿ ವಿಷಯಕ್ಕೂ ಪ್ರಶ್ನೆ ಪತ್ರಿಕೆ ಓದಲು 15 ನಿಮಿಷಗಳನ್ನು ನೀಡಲಾಗುತ್ತದೆ.

ಯಾರೆಲ್ಲಾ ಪರೀಕ್ಷೆ ಬರೆಯಬಹುದು?

2002-03ರಿಂದ 2021- 22ರ ಮುಖ್ಯ ಪರೀಕ್ಷೆವರೆಗೆ ಮತ್ತು 2002-2003ಕ್ಕೂ ಹಿಂದಿನ ವರ್ಷಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಈ ಪೂರಕ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಳ್ಳಬಹುದು.

ಪೂರಕ ಪರೀಕ್ಷೆ ವೇಳಾಪಟ್ಟಿ ಹೀಗಿದೆ..

ಜೂನ್‌ 27: ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ/ ಹಿಂದೂಸ್ತಾನಿ ಸಂಗೀತ

ಜೂನ್‌ 28: ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ)

ಜೂನ್‌ 29 ದ್ವಿತೀಯ ಭಾಷೆ (ಇಂಗ್ಲಿಷ್, ಕನ್ನಡ)

ಜೂನ್‌ 30: ಸಮಾಜ ವಿಜ್ಞಾನ

ಜುಲೈ 01: ತೃತೀಯ ಭಾಷೆ (ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು) ಹಾಗೂ ಎನ್​​ಎಸ್​​ಕ್ಯೂಎಫ್​ ವಿಷಯಗಳು (ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆ್ಯಂಡ್ ವೆಲ್​ನೆಸ್

ಜುಲೈ 02: ಅರ್ಥಶಾಸ್ತ್ರ, ಕೋರ್ ಸಬ್ಜೆಕ್ಟ್

ಜುಲೈ 04: ಗಣಿತ, ಸಮಾಜಶಾಸ್ತ್ರ

ಪರೀಕ್ಷಾ ಶುಲ್ಕದ ಮಾಹಿತಿ

ಒಂದು ವಿಷಯಕ್ಕೆ - 370 ರೂ.ಎರಡು ವಿಷಯಕ್ಕೆ - 461 ರೂ.ಮೂರು ಅಥವಾ ಮೂರಕ್ಕಿಂತ ಮೇಲ್ಪಟ್ಟು -620 ರೂ.ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಹಾಗೂ ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳಿಗೆ ಮಾತ್ರ ಪೂರಕ ಪರೀಕ್ಷೆಯ ಪರೀಕ್ಷಾ ಶುಲ್ಕದಿಂದ ವಿನಾಯಿತಿ ಇದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net