ಇಂದು ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಫಲಿತಾಂಶ: ವೀಕ್ಷಿಸುವುದು ಹೇಗೆ? ಇಲ್ಲಿದೆ ವಿವರ

exam
ಸಾಂದರ್ಭಿಕ ಚಿತ್ರ
Published on

ಬೆಂಗಳೂರು: ಸೆ.27 ಮತ್ತು 29ರಂದು ನಡೆದಿದ್ದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯ ಫಲಿತಾಂಶ ಅ.11ರಂದು ಬೆಳಗ್ಗೆ 10ಗಂಟೆಗೆ ಪ್ರಕಟವಾಗಲಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದಾರೆ.

53 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. ಸರಳೀಕೃತ ಮಾದರಿಯಲ್ಲಿ ಒಂದು ದಿನ ಕೋರ್ ವಿಷಯಗಳಿಗೆ ಹಾಗೂ ಮತ್ತೊಂದು ದಿನ ಭಾಷಾ ವಿಷಯಕ್ಕೆ ಪರೀಕ್ಷೆ ನಡೆದಿತ್ತು.

ಸಚಿವರು ಫಲಿತಾಂಶ ಬಿಡುಗಡೆ ಮಾಡಿದ ಬಳಿಕ https://sslc.karnataka.gov.in/ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net