ಅಗ್ನಿಶಾಮಕ ಸಿಬ್ಬಂದಿ ವಿಮೆ ಮೊತ್ತ 20 ಪಟ್ಟು ಹೆಚ್ಚಳ: ಪೊಲೀಸ್​ ಗೃಹ ಯೋಜನೆಗೆ ಬಂಪರ್​ ಅನುದಾನ

agnishamaka
Published on

ಬೆಂಗಳೂರು: ಅಗ್ನಿಶಾಮಕ ಸಿಬ್ಬಂದಿ ವಿಮೆ ಮೊತ್ತ ಹೆಚ್ಚಳ ಮಾಡಲಾಗಿದ್ದು, 1 ಲಕ್ಷ ರೂಪಾಯಿಯಿಂದ 20 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ. ಇದರ ಜತೆಗೆ, ಪೊಲೀಸ್ ಗೃಹ ಯೋಜನೆಗೆ 250 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಲಾಗಿದೆ.

2ನೇ ಹಂತದಲ್ಲಿ 250 ಕೋಟಿ ರೂಪಾಯಿ ಮಿಸಲಿಡಲಾಗಿದ್ದು, ಮೊಬಿಲಿಟಿ ಯೋಜನೆಗೆ 50 ಕೋಟಿ ರೂ. ಅನುದಾನ ನೀಡಲಾಗಿದೆ.

ರಾಜ್ಯದಲ್ಲಿ ನೂತನ ಕೆಎಸ್​ಆರ್​ಪಿ ಮಹಿಳಾ ಕಂಪನಿ ಆರಂಭಿಸಲು ಯೋಜನೆ ರೂಪಿಸಲಾಗಿದೆ. ಇನ್ನು ದಾವಣಗೆರೆಯಲ್ಲಿ SDRF ಆರಂಭಿಸಲಾಗುವುದು, ಕಾರಾಗೃಹದಲ್ಲಿ ಅತ್ಯಾಧುನಿಕ ಉಪಕರಣ ನೀಡುತ್ತೇವೆ, ಕಾರಾಗೃಹಗಳಲ್ಲಿ ಮೊಬೈಲ್ ಜಾಮರ್ ಅಳವಡಿಕೆ ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನೂತನ ಕಾರಾಗೃಹ ಕಟ್ಟಡಕ್ಕೆ ಅನುಮತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net