

ಬೆಂಗಳೂರು: ಪೊಲೀಸ್ ಸಬ್‍ಇನ್‍ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಬರುವ ಅಕ್ಟೋಬರ್ 3ರಂದು ಲಿಖಿತ ಪರೀಕ್ಷೆ ನಡೆಯಲಿದೆ.
545 ಹುದ್ದೆಗಳಿಗೆ ಕರ್ನಾಟಕ ಪೊಲೀಸ್ ಇಲಾಖೆ ಅರ್ಜಿ ಆಹ್ವಾನಿಸಿದ್ದು, 14,100 ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಳ್ಳಲು ಅರ್ಹರಾಗಿದ್ದಾರೆ. ಇವರಿಗೆ ಈಗಾಗಲೇ ಮಾಹಿತಿಯನ್ನು ರವಾನಿಸಲಾಗಿದ್ದು, ಅ.3ರಂದು ಪರೀಕ್ಷೆ ನಡೆಯಲಿದೆ ಎಂದು ತಿಳಿಸಲಾಗಿದೆ. ಪುರುಷರು ಮಾತ್ರವಲ್ಲದೇ ಮಹಿಳೆಯರಿಗೂ ನೇಮಕಾತಿ ನಡೆಯಲಿದೆ.
ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ದಾವಣಗೆರೆ ಮತ್ತು ತುಮಕೂರು ಜಿಲ್ಲಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ. ಪತ್ರಿಕೆ-1: ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12-30 ರವರೆಗೆ. ಪತ್ರಿಕೆ-2: ಮಧ್ಯಾಹ್ನ 3 ಗಂಟೆಯಿಂದ 04-30 ರವರೆಗೆ ನಡೆಯಲಿದೆ.
ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಈ ಲಿಂಕ್ ಕ್ಲಿಕ್ ಮಾಡಿ. ಅಪ್ಲಿಕೇಷನ್ ನಂಬರ್ ಮತ್ತು ಹುಟ್ಟಿದ ದಿನವನ್ನು ನಮೂದಿಸಿ ಹಾಲ್‌ಟಿಕೆಟ್ ಡೌನ್‌ಲೋಡ್ ಮಾಡಿಕೊಳ್ಳಬಹುದು.