

ಮೈಸೂರು: ನಗರದ ಪ್ರತಿಭಾನ್ವಿತ ಈಜುಪಟು ಎಸ್.ತಾನ್ಯಾ ಅಂತಾರಾಷ್ಟ್ರೀಯ ಈಜು ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಫೆ. 7ರಿಂದ 13ರವರೆಗೆ ನವದೆಹಲಿಯಲ್ಲಿ ನಡೆಯುವ ಅಂತಾರಾಷ್ಟ್ರೀಯ ಈಜು ಸ್ಪರ್ಧೆಯ ಮಹಿಳಾ ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ. ಒಟ್ಟು ಏಳು ದೇಶಗಳು ಪ್ರತಿನಿಧಿಸುತ್ತಿರುವ ಈ ಸ್ಪರ್ಧೆಯಲ್ಲಿ 9ನೇ ತರಗತಿ ಓದುತ್ತಿರುವ ತಾನ್ಯ 14 ರಿಂದ 20 ವರ್ಷದೊಳಗಿನ ವಿಭಾಗದಲ್ಲಿ ಪ್ರತಿನಿಧಿಸುತ್ತಿರುವ ಮೈಸೂರಿನ ಮೊದಲ ಮಹಿಳಾ ಈಜು ಪಟು ಎನ್ನುವುದು ಹೆಮ್ಮೆಯ ವಿಷಯವಾಗಿದೆ.
ಇವರು ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಖೇಲೋ ಇಂಡಿಯಾ ಯೂತ್ ಗೇಮ್ಸ್-2024 ಈಜು ಸ್ಪರ್ಧೆಯ 400 ಮೀಟರ್ ವೈಯಕ್ತಿಕ ಮಿಡ್ಲೆ(ಐಎಂ) ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿದ್ದರು.