ಕೆಎಸ್​ಆರ್​ಟಿಸಿ ಬಸ್​ ಆಕ್ಸೆಲ್ ಬ್ಲೇಡ್ ಕಟ್​! 40 ಪ್ರಯಾಣಿಕರ ಜೀವ ಉಳಿಸಿದ ಚಾಲಕನ ಸಮಯಪ್ರಜ್ಞೆ

tumkur
Published on

ತುಮಕೂರು: ಕೆಎಸ್ಆರ್​ಟಿಸಿ ಬಸ್ ಆಕ್ಸೆಲ್ ಬ್ಲೇಡ್ ತುಂಡಾಗಿ ಸೇತುವೆಗೆ ಡಿಕ್ಕಿ ಹೊಡೆದ ಘಟನೆ ತುಮಕೂರು ಜಿಲ್ಲೆ ಶಿರಾ ನಗರದ ಕಲ್ಲುಕೋಟೆ ಬಳಿ ನಡೆದಿದೆ.

ಚಾಲಕನ ಸಮಯ ಪ್ರಜ್ಞೆಯಿಂದ ಕೂದಲೆಳೆ ಅಂತರದಲ್ಲಿ ಭಾರಿ ಅನಾಹುತ ತಪ್ಪಿದೆ.

ಶಿರಾ ನಗರದಿಂದ ಪಟ್ಟನಾಯಕನಹಳ್ಳಿ ಕಡೆಗೆ 40 ಹೆಚ್ಚು ಪ್ರಯಾಣಿಕರನ್ನು ಹೊತ್ತು ಕೆಎಸ್​ಆರ್​ಟಿಸಿ ಬಸ್​ ಸಾಗುತ್ತಿತ್ತು. ಈ ವೇಳೆ ಬಸ್ಸಿನ ಆಕ್ಸೆಲ್ ಬ್ಲೇಡ್ ಕಟ್ಟಾಗಿ ಸೇತುವೆಗೆ ಡಿಕ್ಕಿ ಹೊಡೆದಿದೆ.

ಬಸ್ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಸ್ ಸ್ವಲ್ಪ ಮುಂದೆ ಸಾಗಿದ್ದರೆ ಸುಮಾರು 20 ಅಡಿ ಆಳದ ಸೇತುವೆಯಿಂದ ಕೆಳಗೆ ಬಿದ್ದು ಭಾರಿ ಪ್ರಾಣಹಾನಿಯಾಗುವ ಸಂಭವವಿತ್ತು. ಆದರೆ ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಸೇತುವೆಗೆ ಡಿಕ್ಕಿ ಹೊಡೆದು ಅದು ಹಾಗೇ ನಿಂತಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಗಾಯಾಳುಗಳನ್ನ ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸ್ಥಳಕ್ಕೆ ಶಿರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net