ಮದುವೆ ಎಂಬುದೇ ಈಕೆಯ ಬಾಳಿಗೆ ಬೆಂಕಿ ಇಟ್ಟಿತಾ? ಹಸೆಮಣೆ ಏರಬೇಕಿದ್ದ ತುಮಕೂರು ವಿದ್ಯಾರ್ಥಿನಿ ಆತ್ಮಹತ್ಯೆ

tumku
Published on

ತುಮಕೂರು: ಬೆಂಕಿಹಚ್ಚಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆ, ಪಾವಗಡ ತಾಲೂಕಿನ ಪಳವಳ್ಳಿ ಗ್ರಾಮದಲ್ಲಿ ನಡೆದಿದೆ.

ತೇಜಾ (19) ಆತ್ಮಹತ್ಯೆ ಮಾಡಿಕೊಂಡು ವಿದ್ಯಾರ್ಥಿನಿ. ಈಕೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇಂದು ಬೆಳಗಿನಜಾವ 4.30ರ ಸುಮಾರಿನಲ್ಲಿ ಘಟನೆ ಸಂಭವಿಸಿದೆ.

ತೇಜಾ, ಪಾವಗಡದಲ್ಲಿ ಮೊದಲನೇ ವರ್ಷದ ಬಿಕಾಂ ವಿದ್ಯಾಭ್ಯಾಸ ಮಾಡುತ್ತಿದ್ದಳು. ಇದೇ ಮೇ 24-25 ರಂದು ಮದುವೆ ನಿಶ್ಚಯವಾಗಿತ್ತು‌. ಪೋಷಕರು ಮದುವೆ ಆಮಂತ್ರಣ ಪತ್ರಿಕೆಯನ್ನು ಎಲ್ಲಾ ಕಡೆ ಕೊಟ್ಟಿದ್ದರು‌.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈಕೆಗೆ ಮದುವೆ ಇಷ್ಟವಿರಲಿಲ್ಲವೋ ಅಥವಾ ಇನ್ನಾವ ಕಾರಣದಿಂದ ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೋ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net