ಸಿನಿಮಾ ನಿರ್ಮಾಪಕ ಉಮಾಪತಿ ಕೊಲೆಗೆ ಸಂಚು: ತಲೆಮರೆಸಿಕೊಂಡವರು ಕೊನೆಗೂ ಸೆರೆಸಿಕ್ಕರು

umapathi
ನಿರ್ಮಾಪಕ ಉಮಾಪತಿ
Published on

ಬೆಂಗಳೂರು :ಸಿನಿಮಾ ನಿರ್ಮಾಪಕ ಉಮಾಪತಿ ಕೊಲೆಗೆ ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ದರ್ಶನ್ ಮತ್ತು ಸಂಜು ಬಂಧಿತರು. 2020ರಲ್ಲಿ ಉಮಾಪತಿ ಹತ್ಯೆಗೆ ಸಂಚು ಪ್ರಕರಣದಲ್ಲಿ ಈಗಾಗಲೇ ಕೆಲ ಆರೋಪಿಗಳ ಬಂಧಿಸಿ ಕೋರ್ಟ್‌ಗೆ ಆರೋಪಪಟ್ಟಿ ಸಲ್ಲಿಸಲಾಗಿದೆ. ಇದೇ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಬಂಧನಕ್ಕೆ ಕಾರ್ಯಾಚರಣೆ ಮುಂದುವರಿಸಲಾಗಿತ್ತು.

ಇತ್ತೀಚೆಗೆ ಆರೋಪಿಗಳು ಸುಂಕದಕಟ್ಟೆ ಚೈತ್ರಾ ಬಾರ್ ಬಳಿ ಇರುವುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ದರ್ಶನ್ ಮತ್ತು ಸಂಜುನನ್ನು ಬಂಧಿಸಲಾಗಿದೆ.

ಹೆಚ್ಚಿನ ವಿಚಾರಣೆಗೆ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net