

ತಮಿಳುನಾಡು ಮತ್ತು ಪುದುಚೇರಿಯಲ್ಲಿರುವ ಜಿಎಸ್ಟಿ ಮತ್ತು ಕೇಂದ್ರ ಅಬಕಾರಿ ಸುಂಕ ಪ್ರಧಾನ ಮುಖ್ಯ ಆಯುಕ್ತ ಕಚೇರಿಯಲ್ಲಿ ವಿವಿಧ ಹುದ್ದೆಗೆ ಪ್ರತಿಭಾವಂತ ಕ್ರೀಡಾಪಟುಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ. ಕ್ರಿಕೆಟ್, ಫುಟ್ಬಾಲ್, ಹಾಕಿ, ಕಬ್ಬಡಿ, ವಾಲಿಬಾಲ್, ಅಥ್ಲೆಟಿಕ್ಸ್- ಟ್ರಾ್ಯಕ್ ಆಂಡ್ ಫೀಲ್ಡ್ (ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ) ಕ್ರೀಡೆಯಲ್ಲಿ ರಾಷ್ಟ್ರೀಯ, ಅಂತಾರಾಷ್ಟ್ರೀಯ, ಅಂತರ ವಿವಿಯ ಟೂರ್ನಮೆಂಟ್ಗಳಲ್ಲಿ ಪಾಲ್ಗೊಂಡ ಅಭ್ಯರ್ಥಿಗಳು ಅರ್ಹರಾಗಿದ್ದಾರೆ.
ಒಟ್ಟು ಹುದ್ದೆಗಳು: 19
ಹುದ್ದೆ ವಿವರ
* ಟ್ಯಾಕ್ಸ್ ಅಸಿಸ್ಟೆಂಟ್ - 13
* ಸ್ಟೆನೋಗ್ರ್ರಾಫರ್ ಗ್ರೇಡ್2 - 2
* ಹವಾಲ್ದಾರ್ - 3
* ಮಲ್ಟಿ ಟಾಸ್ಕಿಂಗ್ ಸ್ಟಾಫ್ - 1
ಶೈಕ್ಷಣಿಕ ಅರ್ಹತೆ: ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ, ಪದವಿ ಪಡೆದಿರಬೇಕು. ಟ್ಯಾಕ್ಸ್ ಅಸಿಸ್ಟೆಂಟ್ಗೆ ಪ್ರತಿ ಗಂಟೆಗೆ 8,000 ಪದಗಳ ಡೇಟಾ ಎಂಟ್ರಿ ವೇಗ ಹೊಂದಿರಬೇಕು. ಸ್ಟೆನೋಗ್ರಾಫರ್ಗೆ ಡಿಕ್ಟೇಷನ್ ಪ್ರತಿ ನಿಮಿಷಕ್ಕೆ 80 ಪದಗಳ ಟೈಪಿಂಗ್ ಸ್ಪೀಡ್, ಇಂಗ್ಲಿಷ್ನಲ್ಲಿ ಪ್ರತಿ ನಿಮಿಷಕ್ಕೆ 50 ಪದ, ಹಿಂದಿ 65 ಪದಗಳ ಪ್ರತಿಲೇಖನ ಕೌಶಲ ಹೊಂದಿರಬೇಕು. ಹವಾಲ್ದಾರ್ಗೆ ದೈಹಿಕ ಮಾನದಂಡ ವಿಧಿಸಲಾಗಿದೆ.
ವಯೋಮಿತಿ: ಎಲ್ಲ ಹುದ್ದೆಗಳಿಗೂ ಕನಿಷ್ಠ 18 ವರ್ಷ, ಗರಿಷ್ಠ 27 ವರ್ಷ ವಯೋಮಿತಿ ನಿಗದಿಪಡಿಸಲಾಗಿದ್ದು, ಮೀಸಲಾತಿ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮದನ್ವಯ ವಯೋಸಡಿಲಿಕೆ ಇದೆ.
ವೇತನ: ಟ್ಯಾಕ್ಸ್ ಅಸಿಸ್ಟೆಂಟ್ ಹಾಗೂ ಸ್ಟೆನೋಗ್ರಾಫರ್ಗೆ ಮಾಸಿಕ 25,500-81,100 ರೂ., ಹವಾಲ್ದಾರ್ ಮತ್ತು ಎಂಟಿಎಸ್ಗೆ ಮಾಸಿಕ 18,000-56,900 ರೂ. ವೇತನ ಇದೆ.
ಆಯ್ಕೆ ಪ್ರಕ್ರಿಯೆ: ಶಾರ್ಟ್ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಲಾಗುವುದು. ಸಂದರ್ಶನದ ದಿನಾಂಕ, ಸ್ಥಳ, ಸ್ಥಳ ಹಾಗೂ ಇತರ ಮಾಹಿತಿಯನ್ನು ಶಾರ್ಟ್ಲಿಸ್ಟ್ ಮಾಡಲಾದ ಅಭ್ಯರ್ಥಿಗಳಿಗೆ ಮೇಲ್ ಮೂಲಕ ತಿಳಿಸಲಾಗುವುದು.
ಅರ್ಜಿ ಸಲ್ಲಿಕೆ ವಿಧಾನ: ಅಭ್ಯರ್ಥಿಗಳು ಯಾವ ಹುದ್ದೆಗೆ ಅರ್ಜಿ ಸಲ್ಲಿಸಲಾಗುತ್ತಿದೆ ಹಾಗೂ ಕ್ರೀಡಾ ವಿಭಾಗದಲ್ಲಿ ಯಾವ ಕ್ರೀಡೆ ಎಂಬುದನ್ನು ಅರ್ಜಿಯಲ್ಲಿ ತಿಳಿಸಬೇಕು. ಅಗತ್ಯ ದಾಖಲೆಗಳ ಸಹಿತ ಅರ್ಜಿಯನ್ನು The Additional Commissioner-CCA, Office of the Principal Chief Commissioner of GST & Central Excise, Tamilnadu & Puducherry Zone, Chennai, GST Bhawan, 26/1 Mahatma Gandhi Road, Nungambakkam, Chennai 600 034 ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಕೆಗೆ ಕೊನೇ ದಿನ: 31.12.2021
ಅಧಿಸೂಚನೆಗೆ: https://bit.ly/3F2q8Cw
ಮಾಹಿತಿಗೆ: http://centralexcisechennai.gov.in