

ಬೆಂಗಳೂರು: ಕೆಂಗೇರಿ ಮತ್ತು ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೀಲಿಂಗ್ ಮಾಡುತ್ತಿದ್ದ ಐವರನ್ನು ವಶಕ್ಕೆ ಪಡೆದು 5 ದ್ವಿಚಕ್ರವಾಹನ ಜಪ್ತಿ ಮಾಡಲಾಗಿದೆ.
ಜು.25ರಂದು ಪಶ್ಚಿಮ ವಿಭಾಗದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೀಲಿಂಗ್ ಮಾಡುವವರ ವಿರುದ್ಧ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದರು. ಕಂಗೇರಿ ಹಾಗೂ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯ ರಸ್ತೆಯಲ್ಲಿ ಓಡಾಡುವ ಇತರೆ ವಾಹನ ಚಾಲಕರಿಗೆ ಭಯವುಂಟು ಮಾಡುವ ರೀತಿಯಲ್ಲಿ ಯುವಕರು ವೀಲಿಂಗ್ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರಿಂದ ಪೊಲೀಸರಿಗೆ ದೂರುಗಳು ಬಂದಿದ್ದವು.
ಈ ದೂರಿನ ಆಧಾರದ ಮೇಲೆ ನೈಸ್ ರಸ್ತೆಯಲ್ಲಿ ಹೋಂಡಾ ಡಿಯೋ ಸ್ಕೂಟರ್‌ನಲ್ಲಿ ವೀಲಿಂಗ್ ಮಾಡುತ್ತಿದ್ದ ನಾಲ್ವರನ್ನು ಪತ್ತೆಹಚ್ಚಿದ ಕೆಂಗೇರಿ ಪೊಲೀಸರು ಅವರನ್ನು ವಶಕ್ಕೆ ಪಡೆದು ಪ್ರತ್ಯೇಕ 4 ಪ್ರಕರಣ ದಾಖಲಿಸಿಕೊಂಡು ಸೂಕ್ತ ಕ್ರಮ ಕೈಗೊಂಡಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಹೊಸಕೆರೆಹಳ್ಳಿಯ ಟೋಲ್ ರಸ್ತೆಯಲ್ಲಿ ಸ್ಕೂಟರ್‌ನಲ್ಲಿ ವೀಲಿಂಗ್ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು ಆತನ ವಿರುದ್ಧ ಸೂಕ್ತ ಕ್ರಮ ಕೈಗೊಂಡಿದ್ದಾರೆ.