ಸೇವೆಯಿಂದ ಸಾಧನೆಯ ಸಾರ್ಥಕ್ಯ: ಸಾಧನಾ ರಾಜ್ಯ ಪ್ರಶಸ್ತಿ ಸ್ವೀಕರಿಸಿ ಡಾ.ಹೇಮಾವತಿ ವೀ.ಹೆಗ್ಗಡೆ ಅಭಿಮತ

IMG-20230313-WA0050
Published on

ಮಂಗಳೂರು: ಕ್ಷೇತ್ರದಲ್ಲಿ ಗ್ರಾಮೀಣಾಭಿವೃದ್ಧಿ ಯೋಜನೆ ಆರಂಭವಾದಾಗಿನಿಂದ ರಾಜ್ಯವ್ಯಾಪಿಯಾಗಿ ಮಹಿಳೆಯರ ಜೀವನ ಗುಣಮಟ್ಟ ಅಭಿವೃದ್ಧಿಗಾಗಿ ಸಮಗ್ರವಾಗಿ ಕೆಲಸ ಮಾಡಿದ್ದೇವೆ. ಈ ಸಾಧನೆಯ ಹಿಂದೆ ಯೋಜನೆಯ ಕಾರ್ಯಕರ್ತರ ಶ್ರಮದ ಪಾಲೂ ದೊಡ್ಡದು. ಸೇವಾ ಮನೋಭಾವವೇ ಸಾಧನೆಯ ಸಾರ್ಥಕತೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ.ಹೇಮಾವತಿ ವೀ.ಹೆಗ್ಗಡೆ ಹೇಳಿದರು.

ಮಹಿಳಾ ಸಬಲೀಕರಣ ಕ್ಷೇತ್ರಕ್ಕೆ ನೀಡಿದ ಅನನ್ಯ ಸೇವೆಗಾಗಿ ಸಾಧನಾ ರಾಷ್ಟ್ರೀಯ ಸಾಂಸ್ಕೃತಿಕ ಪ್ರತಿಷ್ಠಾನದ ಪ್ರತಿಷ್ಠಿತ ಸಾಧನಾ ರಾಜ್ಯ ಪ್ರಶಸ್ತಿಯನ್ನು ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ ಮುಖ್ಯ ಕಚೇರಿ ಸಭಾಂಗಣದಲ್ಲಿ ಸೋಮವಾರ ಸ್ವೀಕರಿಸಿ ಮಾತನಾಡಿದರು.

ಸಾಧನಾ ಪ್ರಶಸ್ತಿಯನ್ನು ಅತ್ಯಂತ ಆನಂದದಿಂದ ಸ್ವೀಕರಿಸಿದ್ದೇನೆ ಎಂದು ಸಂತಸ ವ್ಯಕ್ತಪಡಿಸಿದರು. ಹಿರಿಯ ಸಾಹಿತಿ ಇರಾ ನೇಮು ಪೂಜಾರಿ ಪ್ರಶಸ್ತಿ ಪ್ರದಾನ ಮಾಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರದ್ಧಾ ಅಮಿತ್, ಎ.ಎಸ್.ಅಮಿತ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್, ಸಾಧನಾ ರಾಷ್ಟ್ರೀಯ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಸಾಧನಾ ರಾಜ್ಯ ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷ ಕಾ.ವೀ.ಕೃಷ್ಣದಾಸ್, ಸಂಚಾಲಕಿ ಲತಾ ಕೃಷ್ಣದಾಸ್, ಕಾರ್ಯದರ್ಶಿ ರಾಜೇಶ್ವರಿ ಮಂಜುನಾಥ್, ಪ್ರತಿಷ್ಠಾನದ ಕಾರ್ಯಕಾರಿ ಸಮಿತಿ ಸದಸ್ಯರಾದ ಶಕುಂತಳಾ ಬೆಳ್ಮಣ್, ಸಂಘಟಕ, ಉದ್ಯಮಿ ಗುರುಪ್ರಸಾದ್ ಕಡಂಬಾರ್, ದ.ಕ. ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಹರೀಶ ಸುಲಾಯ ಒಡ್ಡಂಬೆಟ್ಟು, ತುಳು ಲಿಪಿ ಶಿಕ್ಷಕಿ, ಕವಯಿತ್ರಿ ಗೀತಾ ಲಕ್ಷ್ಮೀಶ್ ಅತಿಥಿಗಳಾಗಿದ್ದರು. ಆರ್‌ಜೆ ಪ್ರಸನ್ನ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net