

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಆಜೀವ ಸದಸ್ಯತ್ವ ಅಭಿಯಾನ ಜೂ.19ರಂದು ಮಂಗಳೂರು ನಗರದಾದ್ಯಂತ ನಡೆಯಲಿದೆ. ನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದಲ್ಲಿ ಬೆಳಗ್ಗೆ 10ಕ್ಕೆ ಸಂಸ್ಥೆಯ ಪ್ರಾಂಶುಪಾಲ ಡಾ.ತಾರಾನಾಥ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಕಾಲೇಜು ವಿದ್ಯಾರ್ಥಿಗಳು ,ಶಿಕ್ಷಕರು, ಪ್ರಾಧ್ಯಾಪಕರು ,ಸರ್ಕಾರಿ ಅಧಿಕಾರಿಗಳು, ಸಂಘ, ಸಂಸ್ಥೆಗಳ ಪ್ರತಿನಿಧಿಗಳು, ಸಾಹಿತಿಗಳು ಈ ಅಭಿಯಾನಕ್ಕೆ ಸಹಕರಿಸಲಿದ್ದಾರೆ.
ಪಾಸ್‌ಪೋರ್ಟ್ ಸೈಜ್ ಭಾವಚಿತ್ರ, ಆಧಾರ್ ಕಾರ್ಡ್ ಸಂಖ್ಯೆ ಹಾಗೂ ನಿಗದಿತ ಶುಲ್ಕ (410 ರೂ.)ಪಾವತಿಸಿ ನೋಂದಣಿಗೆ ಅವಕಾಶವಿದೆ. ಎಸ್‌ಡಿಎಂ ಕಾನೂನು ಮಹಾವಿದ್ಯಾಲಯದಲ್ಲಿ ಬೆಳಗ್ಗೆ 10ರಿಂದ ಸಾಯಂಕಾಲ 5ರವರೆಗೆ ಸದಸ್ಯತ್ವ ನೋಂದಣಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಕಾನೂನು ಕಸಾಪ ದ.ಕ.ಜಿಲ್ಲಾಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
............................