ನರೇಗಾ ಸಮರ್ಪಕ ಅನುಷ್ಠಾನ ಮಾಡಿ; ಅಧಿಕಾರಿಗಳಿಗೆ ಸಂಸದರಾದ ಬಸವರಾಜು, ನಾರಾಯಣಸ್ವಾಮಿ ಸೂಚನೆ

DSC_5692
Published on

ತುಮಕೂರು : ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಸಮರ್ಪಕ ಅನುಷ್ಠಾನ, ಅನುದಾನದ ಸದ್ಬಳಕೆ, ಕೃಷಿ ಮತ್ತು ತೋಟಗಾರಿಕೆ ಚಟುವಟಿಕೆಗೆ ಉತ್ತೇಜನಕ್ಕೆ ಆದ್ಯತೆ ನೀಡಬೇಕು ಎಂದು ಸಂಸದರಾದ ಜಿ.ಎಸ್.ಬಸವರಾಜು ಹಾಗೂ ಎ.ನಾರಾಯಣಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಪಂ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ದಿಶಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸದ ಜಿ.ಎಸ್.ಬಸವರಾಜು, ಎಸ್‌ಸಿ, ಎಸ್‌ಟಿ ವರ್ಗಕ್ಕೆ ಆದ್ಯತೆ ನೀಡಬೇಕು, ಶಾಲೆ, ಅಂಗನವಾಡಿ ಕಟ್ಟಡಗಳ ನಿರ್ವಾಣ, ಕೆಲಸ ನಿರ್ವಹಿಸಿದ ಕಾರ್ಮಿಕರಿಗೆ ಕಾಲಮಿತಿಯಲ್ಲೇ ಕೂಲಿ ಪಾವತಿ ಸೇರಿ ಯೋಜನೆಯ ಸಮಗ್ರ ಅನುಷ್ಠಾನವಾಗಬೇಕು ಎಂದರು.

ಸಂಸದ ಎ.ನಾರಾಯಣಸ್ವಾಮಿ ವಾತನಾಡಿ, ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಅಂಗನವಾಡಿ ಮತ್ತು ಶಾಲಾ ಕಟ್ಟಡ, ಶಾಲಾ ಶೌಚಗೃಹಗಳನ್ನು ನಿರ್ಮಿಸಬೇಕು. ದುಸ್ಥಿತಿಯಲ್ಲಿರುವ ಶಾಲಾ ಕೊಠಡಿ ದುರಸ್ತಿಗೊಳಿಸಬೇಕು. ಜತೆಗೆ ಕೆರೆ-ಕಟ್ಟೆಗಳ ಅಭಿವೃದ್ಧಿಗೂ ಆದ್ಯತೆ ನೀಡಿ ಅಂತರ್ಜಲ ಹೆಚ್ಚಳಕ್ಕೆ ಕ್ರಮ ವಹಿಸಬೇಕು. ರೈತರ ಅಭಿವೃದ್ಧಿಗೆ ಒತ್ತು ಕೊಡಬೇಕು. ಸರ್ಕಾರದ ಎಲ್ಲ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಪ್ರಚುರಗೊಳಿಸುವ ಕೆಲಸವಾಗಬೇಕು ಎಂದರು.

ರಾಷ್ಟ್ರೀಯ ಸಾವಾಜಿಕ ಭದ್ರತಾ ಯೋಜನೆಯಡಿ ಬರುವ ಎಲ್ಲ ವೇತನ ಸೌಲಭ್ಯಗಳನ್ನು ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸಬೇಕು. ಯಾವುದೇ ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗಬಾರದು. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಕಾಲಮಿತಿಯೊಳಗೆ ಮನೆಗಳ ನಿರ್ವಾಣಕ್ಕೆ ಕ್ರಮ ವಹಿಸಬೇಕು ಎಂದು ಜಿ.ಎಸ್. ಬಸವರಾಜು ಸೂಚಿಸಿದರು.

ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ವಾತನಾಡಿ, ಸಂಸದರ ನಿರ್ದೇಶನದಂತೆ ನರೇಗಾ ಯೋಜನೆಯಡಿ ಅನುಷ್ಠಾನಕ್ಕಾಗಿ ಕೈಗೊಂಡಿರುವ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಮುಂದಿನ ಸಭೆ ವೇಳೆಗೆ ಈಗ ಸೂಚಿಸಿರುವ ಎಲ್ಲ ಯೋಜನೆಗಳ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಜಿಪಂ ಉಪಕಾರ್ಯದರ್ಶಿ ಟಿ.ಕೆ.ರಮೇಶ್ ಮಾತನಾಡಿ, ಜಿಲ್ಲೆಯಲ್ಲಿ 6200000 ವಾನವ ದಿನಗಳ ಸೃಜನೆ ವಾಡುವ ಗುರಿ ಹೊಂದಲಾಗಿದ್ದು, ಈ ಪೈಕಿ ಜೂನ್ 19ರವರೆಗೆ 1158647 ವಾನವ ದಿನ ಸೃಜಿಸಲಾಗಿದೆ, ಯೋಜನೆಯಡಿ ಈವರೆಗೆ ಅನುಷ್ಠಾನಗೊಳಿಸಿರುವ ಕಾಮಗಾರಿಗಳ ಬಗ್ಗೆ ಸಭೆಗೆ ವಾಹಿತಿ ನೀಡಿದರು. ಸಭೆಗೂ ಆರಂಭಕ್ಕೂ ಮುನ್ನ ಸಂಸದ ಜಿ.ಎಸ್.ಬಸವರಾಜು ‘ದಿಶಾ’ ಜಾಲತಾಣ ಬಿಡುಗಡೆಗೊಳಿಸಿದರು.

ದಿಶಾ ಸಮಿತಿ ಸದಸ್ಯ ಕುಂದರನಹಳ್ಳಿ ರಮೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುವಾರ್ ಶಹಾಪುರವಾಡ್, ಉಪವಿಭಾಗಾಧಿಕಾರಿ ಅಜಯ್ ಇದ್ದರು.

ಪ್ರಸ್ತುತ ಮಳೆಗಾಲ ಪ್ರಾರಂಭಗೊಂಡಿರುವುದರಿಂದ ನರೇಗಾ ಯೋಜನೆಯಡಿ ಅರಣ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಶಾಲೆಗಳಲ್ಲಿ ಗಿಡ ನೆಡಬೇಕು.

ಡಾ.ಕೆ.ವಿದ್ಯಾಕುವಾರಿ ಜಿಪಂ ಸಿಇಒ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net