ಸಾದರ ಸಮಾಜದಿಂದ ಪುರಸ್ಕಾರ

Published on

ಹುಬ್ಬಳ್ಳಿ: ಪ್ರಸಕ್ತ ಸಾಲಿನಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಸಾದರ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಮೇ 18ರಂದು ಬೆಳಗ್ಗೆ 11ಕ್ಕೆ ನಗರದ ಉಣಕಲ್ಲ ತರಳಬಾಳು ಕ್ಯಾಂಪಸ್ ನಲ್ಲಿ ಏರ್ಪಡಿಸಲಾಗಿದೆ.

ಶೇ. 90 ಹಾಗೂ ಅದಕ್ಕಿಂತ ಹೆಚ್ಚು ಅಂಕ ಪಡೆದ ಹುಬ್ಬಳ್ಳಿ ತಾಲೂಕಿನ ಪ್ರತಿಭಾವಂತರಿಗೆ ಸನ್ಮಾನಿಸಲಾಗುವುದು. ಮಕ್ಕಳು, ಪಾಲಕರು ಪಾಲ್ಗೊಳ್ಳಬೇಕೆಂದು ಸಂಘಟಕರಾದ ಶಿವಾನಂದ ಹೆಬಸೂರ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net